ಉಕ್ರೇನ್ನ ಖಾರ್ಕಿವ್ನಲ್ಲಿ ರಷ್ಯಾ ಶೆಲ್ ದಾಳಿಗೆ ಕರ್ನಾಟಕದ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಸಾವು
ರಷ್ಯಾ ಸೇನೆ ಉಕ್ರೇನ್ ನ ಸಾರ್ವಜನಿಕ ಪ್ರದೇಶಗಳ ಮೇಲೆ ದಾಳಿ ನಡೆಸುತ್ತಿದ್ದು ಈ ದಾಳಿಯಲ್ಲಿ ಕರ್ನಾಟಕ ಮೂಲದ ನವೀನ್ ಮೃತಪಟ್ಟಿದ್ದಾರೆ.
Published: 01st March 2022 03:30 PM | Last Updated: 01st March 2022 05:08 PM | A+A A-

ನವೀನ್
ಹಾವೇರಿ: ಉಕ್ರೇನ್ನ ಖಾರ್ಕಿವ್ ನಗರದಲ್ಲಿ ಮಂಗಳವಾರ ಬೆಳಗ್ಗೆ ರಷ್ಯಾದ ಪಡೆ ನಡೆಸಿದ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಕರ್ನಾಟಕದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ರಷ್ಯಾದ ಪಡೆಗಳು ಉಕ್ರೇನ್ನ ಎರಡನೇ ಅತಿದೊಡ್ಡ ನಗರವನ್ನು ಪ್ರವೇಶಿಸಿ, ಉಕ್ರೇನ್ ಸರ್ಕಾರದ ಮೇಲೆ ಒತ್ತಡವನ್ನು ಹೇರಲು ಕಳೆದ ಎರಡು ದಿನಗಳಿಂದ ನಾಗರಿಕರ ಮೇಲೂ ದಾಳಿಯನ್ನು ಪ್ರಾರಂಭಿಸಿದೆ.
ಕರ್ನಾಟಕದ ಮುಖ್ಯಮಂತ್ರಿಗಳ ಕಚೇರಿ ಪ್ರಕಾರ, ಮೃತರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಶೇಖರಪ್ಪ ಜ್ಞಾನಗೌಡರ್ (21) ಎಂದು ಗುರುತಿಸಲಾಗಿದೆ. ಅವರು ಕಳೆದ ನಾಲ್ಕು ವರ್ಷಗಳಿಂದ ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು.
ಅರ್ಖಿಟೆಕ್ಟೋರಾ ಬೆಕೆಟೋವಾ ಮೆಟ್ರೋ ನಿಲ್ದಾಣದ ಬಂಕರ್ನಿಂದ ದಿನಸಿ ವಸ್ತುಗಳನ್ನು ತರಲು ಹೊರಟ ನವೀನ್, ಖಾರ್ಕಿವ್ನ ಬೀದಿಯಲ್ಲಿ ಶೆಲ್ ದಾಳಿಯಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಪ್ರಥಮ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ರಾಣೆಬೆನ್ನೂರಿನ ಪ್ರವೀಣ್ ಅವರ ಸ್ನೇಹಿತರೊಬ್ಬರು ಮೃತ ಕುಟುಂಬದ ಸದಸ್ಯರಿಗೆ ಈ ವಿಷಯ ತಿಳಿಸಿದ್ದಾರೆ. ಸ್ಥಳೀಯ ಉಕ್ರೇನ್ ಕಾಲಮಾನ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
With profound sorrow we confirm that an Indian student lost his life in shelling in Kharkiv this morning. The Ministry is in touch with his family.
— Arindam Bagchi (@MEAIndia) March 1, 2022
We convey our deepest condolences to the family.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಸಾವನ್ನು ದೃಢಪಡಿಸಿದ್ದಾರೆ ಮತ್ತು ಟ್ವೀಟ್ ಮಾಡಿದ್ದಾರೆ. “ಗಹನವಾದ ದುಃಖದಿಂದ, ಇಂದು ಬೆಳಿಗ್ಗೆ ಖಾರ್ಕಿವ್ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾವು ಖಚಿತಪಡಿಸುತ್ತೇವೆ. ಸಚಿವಾಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ.
ಮೃತದೇಹವನ್ನು ಖಾರ್ಕಿವ್ ನಗರದ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮೃತ ನವೀನ್ ಸ್ನೇಹಿತರು ಆತನ ಕುಟುಂಬ ಸದಸ್ಯರಿಗೆ ಖಚಿತಪಡಿಸಿದ್ದಾರೆ.
ಚಳಗೇರಿಯಲ್ಲಿರುವ ಕುಟುಂಬಸ್ಥರು ತೀವ್ರ ಆಘಾತಕ್ಕೆ ಒಳಗಾಗಿದ್ದು, ಗ್ರಾಮಸ್ಥರು, ಸ್ನೇಹಿತರು, ಸಂಬಂಧಿಕರು ಗ್ರಾಮದ ಅವರ ಮನೆ ಮುಂದೆ ಜಮಾಯಿಸಿದ್ದಾರೆ.
ಎಂಇಎ ಅಧಿಕಾರಿಗಳು ನವೀನ್ ಸೋದರ ಸಂಬಂಧಿಯೊಂದಿಗೆ ಮಾತನಾಡಿ ಸಾವನ್ನು ದೃಢಪಡಿಸಿದರು. ''ಯುದ್ಧ ಪ್ರದೇಶವಾಗಿರುವುದರಿಂದ ಈಗ ಶವವನ್ನು ತರಲು ಸಾಧ್ಯವಾಗುತ್ತಿಲ್ಲ. ದೇಹವನ್ನು ಸಂರಕ್ಷಿಸಲು ಮತ್ತು ಸಾಧ್ಯವಾದಷ್ಟು ಬೇಗ ಭಾರತಕ್ಕೆ ತರಲು ಅವರು ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ” ಎಂಇಎ ಕಚೇರಿ ಹೇಳಿದೆ.