ಪೇಪರ್ ಕೊರತೆಯಿಂದ ಪರೀಕ್ಷೆ ರದ್ದುಗೊಳಿಸಿದ ಶ್ರೀಲಂಕಾ ಸರ್ಕಾರ: 45 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಆತಂತ್ರ
1948ರ ನಂತರ ಈ ಪ್ರಮಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದು ಇದೇ ಮೊದಲು. ಇತ್ತೀಚಿಗಷ್ಟೆ ಭಾರತ ಸರ್ಕಾರ ಕೋಟ್ಯಂತರ ರೂ. ನೆರವನ್ನು ಶ್ರೀಲಂಕಾಗೆ ನೀಡುವುದಾಗಿ ಘೋಷಿಸಿತ್ತು.
Published: 20th March 2022 12:25 PM | Last Updated: 20th March 2022 12:25 PM | A+A A-

ಸಾಂದರ್ಭಿಕ ಚಿತ್ರ
ಕೊಲಂಬೊ: ಎಲ್ಲ ಅಂದುಕೊಂಡಂತೆಯೇ ಆಗಿದ್ದರೆ ದೇಶಾದ್ಯಂತ ಸುಮಾರು 45 ಲಕ್ಷ ಮಂದಿ ಶಾಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಆದರೆ ಹಾಗಾಗಲಿಲ್ಲ. ದೇಶದಲ್ಲಿ ಪೇಪರ್ ಕೊರತೆ ಕಂಡುಬಂದಿದ್ದರಿಂದ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿದೆ.
ಇದನ್ನೂ ಓದಿ: ಅಫ್ಘಾನಿಸ್ತಾನ: ಹಸಿವು ಮತ್ತು ಅಪೌಷ್ಟಿಕತೆಗೆ ಮೂರು ತಿಂಗಳಲ್ಲಿ 13,000 ನವಜಾತ ಶಿಶುಗಳು ಬಲಿ
ಶ್ರೀಲಂಕಾ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದು ಜಗತ್ತಿಗೇ ಗೊತ್ತಿದೆ. ಇತ್ತೀಚಿಗಷ್ಟೆ ಭಾರತ ಸರ್ಕಾರ ಕೋಟ್ಯಂತರ ರೂ. ನೆರವನ್ನು ಶ್ರೀಲಂಕಾಗೆ ನೀಡುವುದಾಗಿ ಘೋಷಿಸಿತ್ತು.
ಇದನ್ನೂ ಓದಿ: ವಿಷ ಪ್ರಾಶನ ಭೀತಿ: ಒಂದೇ ತಿಂಗಳಲ್ಲಿ ಸಾವಿರ ಸಿಬ್ಬಂದಿಗಳ ಬದಲಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
1948ರ ನಂತರ ಈ ಪ್ರಮಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದು ಇದೇ ಮೊದಲು. ಅದರಿಂದಾಗಿ ದೇಶದ ಆಹಾರ, ಇಂಧನ ಮತ್ತು ಫಾರ್ಮಾ ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದು ಪರಿಣತರು ಹೇಳಿದ್ದಾರೆ.
ಇದನ್ನೂ ಓದಿ: ಉಕ್ರೇನ್ ಗೆ ಹರಿದುಬರುತ್ತಿರುವ ನೆರವಿನ ಮಹಾಪೂರ: ವರದಾನವಾದ ಕ್ರಿಪ್ಟೊ ಕರೆನ್ಸಿ
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ನೆರವಿಗಾಗಿ ವಿಶ್ವ ಬ್ಯಾಂಕ್ ಅನ್ನೂ ಸಂಪರ್ಕಿಸಿದ್ದಾರೆ. ಈ ಬಗ್ಗೆ ವಿಶ್ವ ಬ್ಯಾಂಕ್ ಇದುವರೆಗೂ ಏನನ್ನೂ ಹೇಳಿಲ್ಲ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವಾಗ ಕೈಗೊಳ್ಳಲಾಗುವುದು ಎಂಬುದರ ಬಗ್ಗೆ ಸರ್ಕಾರ ಇನ್ನೂ ಖಚಿತವಾಗಿ ಹೇಳಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.
ಇದನ್ನೂ ಓದಿ: ಪಾಕ್ ನೆಲದ ಮೇಲೆ ಅಕಸ್ಮಿಕ ಮಿಸೈಲ್ ಪ್ರಯೋಗ: ಭಾರತದ ಬೆನ್ನಿಗೆ ನಿಂತ ಅಮೆರಿಕ, ತನಿಖೆಗೆ ಚೀನಾ ಒತ್ತಾಯ