ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ನಿಧನ
ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಶುಕ್ರವಾರ 73ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶೇಖ್ ಖಲೀಫಾ ಬಿನ್ ಜಾಯೆದ್...
Published: 13th May 2022 08:13 PM | Last Updated: 13th May 2022 08:13 PM | A+A A-

ಶೇಖ್ ಖಲೀಫಾ ಬಿನ್ ಜಾಯೆದ್
ಅಬುದಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಶುಕ್ರವಾರ 73ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶೇಖ್ ಖಲೀಫಾ ಬಿನ್ ಜಾಯೆದ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಸಾವಿಗೆ ಸಂತಾಪ ಸೂಚಿಸಿ, ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
ಇದನ್ನು ಓದಿ: ರಷ್ಯಾ ತೈಲ ನಿಷೇಧ ಮಾಡಿ ಇಕ್ಕಟ್ಟಿಗೆ ಸಿಲುಕಿದ ಅಮೆರಿಕ: ಅಧ್ಯಕ್ಷ ಬೈಡೆನ್ ಫೋನ್ ಕರೆಗೂ ಕ್ಯಾರೆ ಎನ್ನದ ಸೌದಿ ಅರೇಬಿಯಾ, ಯುಎಇ!!
ಶುಕ್ರವಾರದಿಂದ ಧ್ವಜಗಳನ್ನು ಅರ್ಧಮಟ್ಟಕ್ಕಿಳಿಸುವುದು ಮತ್ತು ಮೊದಲ ಮೂರು ದಿನಗಳವರೆಗೆ ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ.
ಶೇಖ್ ಖಲೀಫಾ ಅವರು ನವೆಂಬರ್ 2004ಲ್ಲಿ ಯುಎಇಯ ಎರಡನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರ ತಂದೆಯ ನಂತರ ಫೆಡರೇಶನ್‌ನ ಏಳು ಎಮಿರೇಟ್‌ಗಳಲ್ಲಿ ಶ್ರೀಮಂತ ಅಬುಧಾಬಿಯ 16ನೇ ಆಡಳಿತಗಾರರಾಗಿದ್ದರು.
ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 2014 ರಿಂದ ಸಾರ್ವಜನಿಕವಾಗಿ ವಿರಳವಾಗಿ ಕಾಣಿಸಿಕೊಂಡಿದ್ದರು. ಪಾರ್ಶ್ವವಾಯು ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಯುಎಇ ಅಧ್ಯಕ್ಷರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ಶೇಖ್ ಖಲೀಫಾ ಯಾವಾಗಲೂ ಕೇರಳದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದರು ಎಂದು ಹೇಳಿದ್ದಾರೆ.
“ಕೇರಳದೊಂದಿಗೆ ಸದಾ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದ ಯುಎಇ ಅಧ್ಯಕ್ಷ ಹಿಸ್ ಹೈನೆಸ್ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಎಮಿರೇಟ್ಸ್ ಅನ್ನು ಆಧುನೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ದೂರದೃಷ್ಟಿಯ ನಾಯಕರಾಗಿದ್ದರು. ಅವರ ಕೊಡುಗೆಗಳು ಶಾಶ್ವತವಾಗಿ ಸ್ಮರಣೀಯ” ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.