ಇಂಧನ ದರ ಇಳಿಕೆ ಬೆನ್ನಲ್ಲೇ ಭಾರತವನ್ನು ಹೊಗಳಿದ ಇಮ್ರಾನ್ ಖಾನ್
ಭಾರತದ ಸ್ವತಂತ್ರ ವಿದೇಶಾಂಗ ನೀತಿಗಳ ಬಗ್ಗೆ ಇತ್ತೀಚೆಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇದೀಗ ಮತ್ತೆ ನೆರೆ ದೇಶವನ್ನು ಶ್ಲಾಘಿಸಿದ್ದಾರೆ.
Published: 22nd May 2022 12:36 PM | Last Updated: 23rd May 2022 01:49 PM | A+A A-

ಇಮ್ರಾನ್ ಖಾನ್
ಇಸ್ಲಾಮಾಬಾದ್: ಭಾರತದ ಸ್ವತಂತ್ರ ವಿದೇಶಾಂಗ ನೀತಿಗಳ ಬಗ್ಗೆ ಇತ್ತೀಚೆಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇದೀಗ ಮತ್ತೆ ನೆರೆ ದೇಶವನ್ನು ಶ್ಲಾಘಿಸಿದ್ದಾರೆ.
ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಕುರಿತ ವರದಿಯೊಂದರ ತುಣುಕನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದಾರೆ.
‘ಕ್ವಾಡ್ ಸದಸ್ಯ ರಾಷ್ಟ್ರವಾದರೂ ಅಮೆರಿಕದ ಒತ್ತಡಕ್ಕೆ ಮಣಿಯದ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಮೂಲಕ ಜನರಿಗೆ ನೆರವಾಗಿದೆ. ಸ್ವತಂತ್ರ ವಿದೇಶಾಂಗ ನೀತಿಯ ಮೂಲಕ ಇಂಥದ್ದೇ ಸಾಧನೆ ಮಾಡಬೇಕೆಂದು ನಮ್ಮ ಸರ್ಕಾರ ಉದ್ದೇಶಿಸಿತ್ತು’ ಎಂದು ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಭಾರತದ ವಿರುದ್ಧ ಮಾತನಾಡಲು ಮತ್ತೊಂದು ದೇಶ ಧೈರ್ಯ ಮಾಡಲ್ಲ; ಆದರೆ ಪಾಕ್ ಗುಲಾಮಿ ದೇಶವಾಗಿದೆ: ಇಮ್ರಾನ್ ಖಾನ್
‘ನಮ್ಮ ಸರ್ಕಾರಕ್ಕೆ ಪಾಕಿಸ್ತಾನದ ಹಿತಾಸಕ್ತಿಯೇ ಮುಖ್ಯವಾಗಿತ್ತು. ಆದರೆ ದುರದೃಷ್ಟವಶಾತ್, ಸ್ಥಳೀಯ ಮೀರ್ ಜಾಫರ್ ಮತ್ತು ಮೀರ್ ಸಾದಿಕ್ ಬಾಹ್ಯ ಒತ್ತಡದಿಂದ ಸರ್ಕಾರವನ್ನು ಬದಲಾಯಿಸುವ ಷಡ್ಯಂತ್ರ ಮಾಡಿದರು. ಈಗ ಅವರು ದೇಶದ ಆರ್ಥಿಕತೆಯನ್ನು ವಿನಾಶದ ಪ್ರಪಾತಕ್ಕೆ ದೂಡುತ್ತಿದ್ದಾರೆ’ ಎಂದು ಮತ್ತೊಂದು ಟ್ವೀಟ್ನಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Despite being part of the Quad, India sustained pressure from the US and bought discounted Russian oil to provide relief to the masses. This is what our govt was working to achieve with the help of an independent foreign policy.
— Imran Khan (@ImranKhanPTI) May 21, 2022
1/2 pic.twitter.com/O7O8wFS8jn