ಇಂದಿನಿಂದ ಕ್ವಾಡ್ ಶೃಂಗಸಭೆ: ಟೋಕಿಯೋದಲ್ಲಿ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ
ಭಾರತ, ಅಮೆರಿಕಾ, ಜಪಾನ್ ಹಾಗೂ ಆಸ್ಟ್ರೇಲಿಯಾ ರಾಷ್ಟ್ರಗಳು ರಚನೆ ಮಾಡಿಕೊಂಡಿರುವ ಬಲಿಷ್ಠ ಕ್ವಾಟ್ ಕೂಡದ ಮಹತ್ವದ ಸಭೆ ಸೋಮವಾರ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಪಾನ್'ನ ಟೋಕಿಯೋಗೆ ಭೇಟಿ ನೀಡಿದ್ದಾರೆ.
Published: 23rd May 2022 08:29 AM | Last Updated: 23rd May 2022 12:09 PM | A+A A-

ಟೋಕಿಯೋದಲ್ಲಿ ಪ್ರಧಾನಿ ಮೋದಿ
ಟೋಕಿಯೋ (ಜಪಾನ್): ಭಾರತ, ಅಮೆರಿಕಾ, ಜಪಾನ್ ಹಾಗೂ ಆಸ್ಟ್ರೇಲಿಯಾ ರಾಷ್ಟ್ರಗಳು ರಚನೆ ಮಾಡಿಕೊಂಡಿರುವ ಬಲಿಷ್ಠ ಕ್ವಾಟ್ ಕೂಡದ ಮಹತ್ವದ ಸಭೆ ಸೋಮವಾರ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಪಾನ್'ನ ಟೋಕಿಯೋಗೆ ಭೇಟಿ ನೀಡಿದ್ದಾರೆ.
ಇದು ಬೆಳಿಗ್ಗೆ ಟೋಕಿಯೋಗೆ ಪ್ರಧಾನಿ ಮೋದಿಯವರು ಭೇಟಿ ನೀಡಿದ್ದು, ಮೋದಿಯವರಿಗೆ ಜಪಾನ್ ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಆತ್ಮೀಯವಾಗಿ ಸ್ವಾಗತಿಸಿದರು.
ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಮೋದಿ ಟೋಕಿಯೋಗೆ 2 ದಿನಗಳ ಕಾಲ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಮೇ 24ಕ್ಕೆ ಕ್ವಾಡ್ ರಾಷ್ಟ್ರಗಳ ಶೃಂಗ ಸಭೆ: ಜಪಾನ್'ಗೆ ಪ್ರಧಾನಿ ಮೋದಿ ಭೇಟಿ, 40 ಗಂಟೆಗಳಲ್ಲಿ 23 ಕಾರ್ಯಕ್ರಮಗಳಲ್ಲಿ ಭಾಗಿ
ಕಳೆದ 8 ವರ್ಷಗಳಲ್ಲಿ ಜಪಾನ್ಗೆ ಐದನೇ ಭೇಟಿ ಇದಾಗಿದ್ದು, ಮೋದಿ ಅವರನ್ನು ಟೋಕಿಯೋದಲ್ಲಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
ಮೇ 24 ರಂದು ಟೋಕಿಯೋದಲ್ಲಿ ನಡೆಯಲಿರುವ ಕ್ವಾಡ್ ಶೃಂಗದಲ್ಲಿ ಮೋದಿ ಮಾತ್ರವಲ್ಲದೇ, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಷಿದಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಆಸ್ಟ್ರೇಲಿಯಾದ ನಿಯೋಜಿತ ಆಂಥೋನಿ ಅಲ್ಬನೀಸ್ ಭಾಗವಹಿಸಲಿದ್ದಾರೆ.
ಜಪಾನ್ಗೆ ತೆರಳುವುದಕ್ಕೂ ಮುನ್ನಾ ಹೇಳಿಕೆ ನೀಡಿದ್ದ ಪ್ರಧಾನಿ ಮೋದಿಯವರು, ಜಪಾನ್ನಲ್ಲಿನ ಎರಡನೇ ವ್ಯಕ್ತಿಗತ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದೇನೆ, ನಾಲ್ಕು ದೇಶಗಳ ನಾಯಕರಿಗೆ ಉಪಕ್ರಮಗಳ ಪ್ರಗತಿಯನ್ನು ಪರಿಶೀಲಿಸಲು ಮತ್ತು ಇಂಡೋ-ಪೆಸಿಫಿಕ್ನಲ್ಲಿನ ಬೆಳವಣಿಗೆಗಳು ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಕ್ವಾಡ್ ಅವಕಾಶವನ್ನು ಒದಗಿಸುತ್ತದೆ. ನಾವು ಪ್ರಾದೇಶಿಕ ಬೆಳವಣಿಗೆಗಳು ಮತ್ತು ಸಮಕಾಲೀನ ಜಾಗತಿಕ ಸಮಸ್ಯೆಗಳ ಕುರಿತು ನಮ್ಮ ಮಾತುಕತೆಗಳನ್ನು ಮುಂದುವರಿಸುತ್ತೇವೆ' ಎಂದು ಹೇಳಿದ್ದಾರೆ.