ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು; ವ್ಯಕ್ತಿ ಬಂಧನ!
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Published: 03rd November 2022 06:40 PM | Last Updated: 03rd November 2022 06:40 PM | A+A A-

ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ
ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Injured in the assassination attempt on Imran Khan, Senator @FaisalJavedKhan speaks exclusively. #عمران_خان_ہماری_ریڈ_لائن_ہے pic.twitter.com/PyrgQoeTs7
— PTI (@PTIofficial) November 3, 2022
ತೆಹ್ರೀಕ್ ಇ ಪಾಕಿಸ್ತಾನ ಪಕ್ಷದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಆ ಗುಂಡಿನ ದಾಳಿಯಲ್ಲಿ ಸ್ವತಃ ಇಮ್ರಾನ್ ಖಾನ್ ಕೂಡ ಗಾಯಗೊಂಡಿದ್ದಾರೆ. ಅವರಲ್ಲದೆ, ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
Today's Biggest Hero!
— PTI Politics. (@PTIPoliticsss) November 3, 2022
Our Hero who saved Imran Khan's life by tackling the attacker who was firing! pic.twitter.com/9hwiwgQpOp
ವಜೀರಾಬಾದ್‌ನ ಅಲ್ಲಾ ಹೋ ಚೌಕ್ ಬಳಿ ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವ್ರ ಕಂಟೈನರ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಮ್ರಾನ್ ಖಾನ್ ಬಲಗಾಲಿಗೆ ಗುಂಡು ತಗುಲಿದ್ದು, ಅವರನ್ನು ಕೂಡ ತೀವ್ರ ಭದ್ರತೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಪಾಕ್ ಚುನಾವಣಾ ಆಯೋಗದ ಮುಖ್ಯಸ್ಥರ ವಿರುದ್ಧ 10 ಬಿಲಿಯನ್ ರೂಪಾಯಿ ಮಾನನಷ್ಟ ಮೊಕದ್ದಮೆ: ಇಮ್ರಾನ್ ಖಾನ್
ಇನ್ನು ಪೊಲೀಸರು ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನ ಸಹ ಬಂಧಿಸಿದ್ದು, ಅಜ್ಞಾತ ಸ್ಥಳದಲ್ಲಿ ಆತನನ್ನು ಭದ್ರತಾ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.