ಪಿಎನ್ ಬಿ ವಂಚನೆ ಪ್ರಕರಣ: ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಯುಕೆ ಹೈಕೋರ್ಟ್ ಆದೇಶ

ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ)ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಲಂಡನ್‌ನ ಹೈಕೋರ್ಟ್...
ನೀರವ್ ಮೋದಿ
ನೀರವ್ ಮೋದಿ

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ)ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಲಂಡನ್‌ನ ಹೈಕೋರ್ಟ್ ಬುಧವಾರ ಆದೇಶಿಸಿದೆ.

ಈ ವರ್ಷದ ಆರಂಭದಲ್ಲಿ ಮೇಲ್ಮನವಿ ವಿಚಾರಣೆಯ ಅಧ್ಯಕ್ಷತೆ ವಹಿಸಿದ್ದ ಲಾರ್ಡ್ ಜಸ್ಟೀಸ್ ಜೆರೆಮಿ ಸ್ಟುವರ್ಟ್-ಸ್ಮಿತ್ ಮತ್ತು ನ್ಯಾಯಮೂರ್ತಿ ರಾಬರ್ಟ್ ಜೇ ಅವರು ಈ ತೀರ್ಪು ನೀಡಿದ್ದಾರೆ.

ಆಗ್ನೇಯ ಲಂಡನ್‌ನ ವಾಂಡ್ಸ್‌ವರ್ತ್ ಜೈಲಿನಲ್ಲಿರುವ 51 ವರ್ಷದ ಉದ್ಯಮಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಕಳೆದ ಫೆಬ್ರವರಿಯಲ್ಲಿ ವೆಸ್ಟ್‌ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಿಸಿತ್ತು. ಈ ತೀರ್ಪಿನ ವಿರುದ್ಧ ನೀರವ್ ಮೋದಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಯುಕೆ ಹೈಕೋರ್ಟ್ ವಜಾಗೊಳಿಸಿದೆ.

ನೀರವ್ ಮೋದಿ ಅವರ ಮಾನಸಿಕ ಸ್ಥಿತಿಯ ಬಗ್ಗೆ ನಾವು ಸಾಕಷ್ಟು ತೃಪ್ತಿ ಹೊಂದಿದ್ದೇವೆ. ಅವರನ್ನು ಗಡಿಪಾರು ಮಾಡುವುದು ಅನ್ಯಾಯ ಅಥವಾ ದಬ್ಬಾಳಿಕೆಯಾಗುತ್ತದೆ ಎನ್ನುವುದಕ್ಕೆ ಯಾವುದೇ ಪೂರಕ ಅಂಶಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com