ಜೋ ಬಿಡೆನ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ: ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ!
ಜಿ20 ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಸ್ ಅಧ್ಯಕ್ಷ ಜೋ ಬಿಡನ್ ಮುಖಾಮುಖಿಯಾಗಿದ್ದು ನಿರ್ಣಾಯಕ, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳು ಸೇರಿದಂತೆ ಭಾರತ-ಅಮೆರಿಕಾ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಿತಿಗಳನ್ನು ಪರಿಶೀಲಿಸಿದರು.
Published: 15th November 2022 05:36 PM | Last Updated: 15th November 2022 05:41 PM | A+A A-

ಪ್ರಧಾನಿ ಮೋದಿ-ಜೋ ಬಿಡೆನ್
ನವದೆಹಲಿ: ಜಿ20 ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಸ್ ಅಧ್ಯಕ್ಷ ಜೋ ಬಿಡನ್ ಮುಖಾಮುಖಿಯಾಗಿದ್ದು ನಿರ್ಣಾಯಕ, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ಕೃತಕ ಬುದ್ಧಿಮತ್ತೆಯಂತಹ ಕ್ಷೇತ್ರಗಳು ಸೇರಿದಂತೆ ಭಾರತ-ಅಮೆರಿಕಾ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಿತಿಗಳನ್ನು ಪರಿಶೀಲಿಸಿದರು.
ಇಂಡೋನೇಷ್ಯಾದ ಬಾಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿದೆ. ಜಿ20 ರಾಷ್ಟ್ರಗಳ ಪ್ರಧಾನಿಗಳು, ಅಧ್ಯಕ್ಷರು ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಜೋ ಬಿಡಿನ್ ಭೇಟಿಯಾಗಿದ್ದು ಉಕ್ರೇನ್ ಸಂಘರ್ಷ ಮತ್ತು ಅದರ ಪರಿಣಾಮಗಳ ಬಗ್ಗೆ ಚರ್ಚಿಸಿದ್ದಾರೆ. ಆದಾಗ್ಯೂ, ಉಭಯ ನಾಯಕರು ತಮ್ಮ ಸಭೆಯಲ್ಲಿ ಪ್ರಸ್ತುತ ಜಾಗತಿಕ ಮತ್ತು ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು MEA ಹೇಳಿಕೆಯಲ್ಲಿ ತಿಳಿಸಿದೆ.
ಉಭಯ ನಾಯಕರು 'ನಿರ್ಣಾಯಕ' ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಭವಿಷ್ಯ-ಆಧಾರಿತ ಕ್ಷೇತ್ರಗಳು, ಸುಧಾರಿತ ಕಂಪ್ಯೂಟಿಂಗ್, ಕೃತಕ ಬುದ್ಧಿಮತ್ತೆ ಇತ್ಯಾದಿಗಳಲ್ಲಿ ಸಹಕಾರ ಸೇರಿದಂತೆ ಆಳವಾದ ಭಾರತ-ಯುಎಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಪರಿಶೀಲಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಜಿ-20 ಶೃಂಗಸಭೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಜೊತೆ ಪ್ರಧಾನಿ ಮೋದಿ ಮಾತುಕತೆ
ಭಾರತ-ಅಮೆರಿಕಾ ನಡುವೆ ಆಳವಾದ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ನಿರಂತರ ಸಹಕಾರಕ್ಕಾಗಿ ಅಧ್ಯಕ್ಷ ಜೋ ಬಿಡನ್ ಅವರಿಗೆ ಪ್ರಧಾನಿ ಮೋದಿ ಅವರು ಧನ್ಯವಾದ ಅರ್ಪಿಸಿದರು. ಭಾರತದ G20 ಪ್ರೆಸಿಡೆನ್ಸಿ ಅವಧಿಯಲ್ಲಿ ಉಭಯ ದೇಶಗಳು ನಿಕಟವಾಗಿ ಸಮನ್ವಯವನ್ನು ಮುಂದುವರೆಸುತ್ತವೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.'ಕ್ವಾಡ್' ಮತ್ತು 'ಐ2ಯು2' ನಂತಹ ಹೊಸ ಗುಂಪುಗಳಲ್ಲಿ ಭಾರತ ಮತ್ತು ಅಮೆರಿಕಾ ನಡುವಿನ ನಿಕಟ ಸಹಕಾರದ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.