
ಸಾಂದರ್ಭಿಕ ಚಿತ್ರ
ಬೀಜಿಂಗ್: ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ) ಬಳಿ ನಡೆಯುತ್ತಿರುವ ಭಾರತ-ಅಮೆರಿಕ ಜಂಟಿ ಸೇನಾ ಯುದ್ಧ ಅಭ್ಯಾಸವನ್ನು ವಿರೋಧಿಸುವುದಾಗಿ ಚೀನಾ ಬುಧವಾರ ಹೇಳಿದೆ.
ಎಲ್ಎಸಿ ಬಳಿ ಭಾರತ-ಅಮೆರಿಕ ಜಂಟಿ ಸೇನಾ ಯುದ್ಧ ಅಭ್ಯಾಸವು ನವದೆಹಲಿ ಮತ್ತು ಬೀಜಿಂಗ್ ನಡುವೆ ಸಹಿ ಮಾಡಿದ ಗಡಿ ಒಪ್ಪಂದಗಳನ್ನು ಉಲ್ಲಂಘಿಸುತ್ತದೆ ಎಂದು ಚೀನಾ ಪ್ರತಿಪಾದಿಸಿದೆ.
18ನೇ ಭಾರತ-ಅಮೆರಿಕ ಜಂಟಿ ಸೇನಾ 'ಯುದ್ಧ ಅಭ್ಯಾಸ' ಪ್ರಸ್ತುತ ಉತ್ತರಾಖಂಡದಲ್ಲಿ ನಡೆಯುತ್ತಿದ್ದು, ಇದು ಎಲ್‌ಎಸಿಯಿಂದ ಸುಮಾರು 100 ಕಿ.ಮೀ. ದೂರದಲ್ಲಿದೆ.
ಇದನ್ನು ಓದಿ: ಚೀನಾ ಮಾಜಿ ಅಧ್ಯಕ್ಷ ಜಿಯಾಂಗ್ ಜೆಮಿನ್ ನಿಧನ
ಎಲ್ಎಸಿ ಹತ್ತಿರ ಭಾರತ ಮತ್ತು ಅಮೆರಿಕ ನಡುವಿನ ಜಂಟಿ ಸೇನಾ ಯುದ್ಧ ಅಭ್ಯಾಸವು 1993 ಮತ್ತು 1996 ರಲ್ಲಿ ಚೀನಾ ಮತ್ತು ಭಾರತ ನಡುವಿನ ಒಪ್ಪಂದದ ಮನೋಭಾವವನ್ನು ಉಲ್ಲಂಘಿಸುತ್ತದೆ" ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್ ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದು ಚೀನಾ ಮತ್ತು ಭಾರತದ ನಡುವಿನ ಪರಸ್ಪರ ನಂಬಿಕೆಗೆ ಪೂರಕವಾಗಿಲ್ಲ ಎಂದು ಪಾಕಿಸ್ತಾನದ ವರದಿಗಾರ ಕೇಳಿದ ಪ್ರಶ್ನೆಗೆ ಲಿಜಿಯಾನ್ ಉತ್ತರಿಸಿದರು.
ಎರಡು ರಾಷ್ಟ್ರಗಳ ಸೇನೆಗಳ ನಡುವೆ ಉತ್ತಮ ಅಭ್ಯಾಸಗಳು, ತಂತ್ರಗಳು ಮತ್ತು ಕಾರ್ಯವಿಧಾನಗಳನ್ನು ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಪ್ರತಿ ವರ್ಷ ಭಾರತ ಮತ್ತು ಅಮೆರಿಕ ನಡುವೆ ಸೇನಾ ಸಮರಾಭ್ಯಾಸ ನಡೆಸಲಾಗುತ್ತದೆ.