ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್

ಮಹಿಳಾ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಇಮ್ರಾನ್ ಖಾನ್
ಇಮ್ರಾನ್ ಖಾನ್

ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಧ ಝೀಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಪಾಕ್ ಮಾಜಿ ಪ್ರಧಾನಿ ವಿರುದ್ಧ ಆಗಸ್ಟ್ 20 ರಂದು ದಾಖಲಾದ ಪ್ರಕರಣದಲ್ಲಿ ಇಸ್ಲಾಮಾಬಾದ್‌ನ ಮರ್ಗಲ್ಲಾ ಪೊಲೀಸ್ ಠಾಣೆಯ ಮ್ಯಾಜಿಸ್ಟ್ರೇಟ್ ವಾರಂಟ್ ಹೊರಡಿಸಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಇಮ್ರಾನ್ ಖಾನ್ ಅಫಿಡವಿಟ್ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಈ ಬಂಧನ ವಾರಂಟ್ ಬಂದಿದ್ದು, ಯಾವುದೇ ನ್ಯಾಯಾಲಯ ಮತ್ತು ನ್ಯಾಯಾಂಗದ ಅದರಲ್ಲೂ ಕೆಳಮಟ್ಟದ ನ್ಯಾಯಾಂಗದ ಘನತೆಗೆ ಧಕ್ಕೆ ತರುವಂತಹ ಯಾವುದೇ ಕಾರ್ಯವನ್ನು ಭವಿಷ್ಯದಲ್ಲಿ ಮಾಡುವುದಿಲ್ಲ ಎಂದು ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ ಎಂದು ಅಫಿಡವಿಟ್ ಉಲ್ಲೇಖಿಸಿ ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

'ಕೆಂಪು ಗೆರೆ' ದಾಟಿದೆ ಎಂದು ನ್ಯಾಯಾಧೀಶರು ಭಾವಿಸಿದರೆ 'ಕ್ಷಮೆ ಕೇಳಲು ಸಿದ್ಧರಿರುವುದಾಗಿ' ಪದಚ್ಯುತ ಪ್ರಧಾನಿ ಹೇಳಿದ್ದರು.

ಎಫ್-9 ಪಾರ್ಕ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಝೀಬಾ ಚೌಧರಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಯಾಂಗವು ತಮ್ಮ ಕಾನೂನು ಬಾಧ್ಯತೆಗಳನ್ನು ನಿರ್ವಹಿಸುವುದನ್ನು ತಡೆಯುವುದೇ ಇದರ ಮುಖ್ಯ ಗುರಿಯಾಗಿದೆ ಎಂದು ಆಗಸ್ಟ್ 20 ರಂದು ದಾಖಲಿಸಲಾದ ಎಫ್‌ಐಆರ್ ಹೇಳುತ್ತದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಇಸ್ಲಾಮಾಬಾದ್‌ನ ಎಫ್-9 ಪಾರ್ಕ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಪಿಟಿಐ ಅಧ್ಯಕ್ಷರು, ಇಸ್ಲಾಮಾಬಾದ್‌ನ ಇನ್ಸ್‌ಪೆಕ್ಟರ್-ಜನರಲ್, ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಮತ್ತು ಮಹಿಳಾ ಮ್ಯಾಜಿಸ್ಟ್ರೇಟ್ ಅವರನ್ನು 'ಬಿಡುವುದಿಲ್ಲ' ಎಂದು ಎಚ್ಚರಿಸಿದರು. ಪಿಟಿಐ ನಾಯಕ ಶಹಬಾಜ್ ಗಿಲ್ ಅವರಿಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಮೇಲಿನ ಎಲ್ಲರ ವಿರುದ್ದ ಪ್ರಕರಣಗಳನ್ನು ದಾಖಲಿಸುವುದಾಗಿ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com