ಟ್ವಿಟರ್ ಖರೀದಿ ಒಪ್ಪಂದ ಪ್ರಕ್ರಿಯೆ ಮುಂದುವರಿಕೆ: ಎಲಾನ್ ಮಸ್ಕ್

ಖ್ಯಾತ ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್ ಖರೀದಿ ವಿಚಾರವಾಗಿ ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಇದೀಗ ಮತ್ತೆ ಟ್ವಿಟರ್ ಖರೀದಿ ಪ್ರಕ್ರಿಯೆ ಮುಂದುವರೆಸಲು ತಾವು ಸಿದ್ಧವಿರುವುದಾಗಿ ಮಹತ್ವದ ಘೋಷಣೆ ಮಾಡಿದ್ದಾರೆ.
ಎಲಾನ್ ಮಸ್ಕ್
ಎಲಾನ್ ಮಸ್ಕ್

ವಾಷಿಂಗ್ಟನ್: ಖ್ಯಾತ ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್ ಖರೀದಿ ವಿಚಾರವಾಗಿ ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಇದೀಗ ಮತ್ತೆ ಟ್ವಿಟರ್ ಖರೀದಿ ಪ್ರಕ್ರಿಯೆ ಮುಂದುವರೆಸಲು ತಾವು ಸಿದ್ಧವಿರುವುದಾಗಿ ಮಹತ್ವದ ಘೋಷಣೆ ಮಾಡಿದ್ದಾರೆ.

ಈ ಹಿಂದೆ ಒಪ್ಪಂದ ಮಾಡಿಕೊಂಡಿದ್ದಂತೆ ತಾವು 44 ಶತಕೋಟಿ ಡಾಲರ್ ಗೆ ಟ್ವಿಟರ್ ಖರೀದಿಗೆ ಸಿದ್ಧವಿರುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.  ಟ್ವಿಟ್ಟರ್ ಅನ್ನು ಖರೀದಿಸಲು ಮಸ್ಕ್ ಪ್ರತಿ ಷೇರಿಗೆ USD 54.20 ಅನ್ನು ಮುಂದುವರಿಸಲು ಪ್ರಸ್ತಾಪಿಸುತ್ತಿದ್ದಾರೆ ಎಂದು ಬ್ಲೂಮ್‌ಬರ್ಗ್ ನ್ಯೂಸ್ ಅನ್ನು ಉಲ್ಲೇಖಿಸಿ ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಹಿಂದೆ ಬದಲಾದ ಸನ್ನಿವೇಶದಲ್ಲಿ ಟ್ವಿಟರ್ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದ ಮಸ್ಕ್ ಬಳಿಕ ಒಪ್ಪಂದದಿಂದ ಹಿಂದೆ ಸರಿದಿರುವುದಾಗಿ ಘೋಷಣೆ ಮಾಡಿದ್ದರು. ಟ್ವಿಟರ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿರುವ ಬೋಟ್ ಖಾತೆಗಳ ಸಂಖ್ಯೆಗೆ ಸಂಬಂಧಿಸಿದಂತೆ ತನ್ನನ್ನು ದಾರಿ ತಪ್ಪಿಸಲಾಗಿದೆ ಎಂದು ಒಪ್ಪಂದವನ್ನು ರದ್ದುಗೊಳಿಸಿದ್ದರು. ಈ ಆರೋಪಗಳನ್ನು ಟ್ವಿಟರ್ ಸಂಸ್ಥೆ ಸಾರಾಸಗಟಾಗಿ ತಿರಸ್ಕರಿಸಿತ್ತು. ಈ ಸಂಬಂಧ ನ್ಯಾಯಾಲಯದಲ್ಲಿ ಟ್ವಿಟರ್ ದಾವೆ ಕೂಡ ಹೂಡಿದ್ದು, ಟ್ವಿಟರ್ ಖರೀದಿ ಒಪ್ಪಂದದ ಇತ್ತೀಚಿನ ವರದಿಯು ಅಕ್ಟೋಬರ್ 17 ರಂದು ಡೆಲವೇರ್ ನ್ಯಾಯಾಲಯದ ವಿಚಾರಣೆಗೆ ಮುಂಚಿತವಾಗಿ ಬರುತ್ತದೆ.

ಟ್ವಿಟರ್ ಖರೀದಿ ಒಪ್ಪಂದ ಮತ್ತು ಅದರಿಂದ ಹಿಂದೆ ಸರಿಯುವಿಕೆ ವ್ಯಾಪಕ ಟೀಕೆ ಹಾಗೂ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೆ ಟ್ವಿಟರ್ ಖರೀದಿ ಪ್ರಕ್ರಿಯೆಯನ್ನು ಮುಂದುವರೆಸುವುದಾಗಿ ಮಸ್ಕ್ ಘೋಷಣೆ ಮಾಡಿದ್ದಾರೆ. ಟೆಸ್ಲಾ ಮುಖ್ಯಸ್ಥರು ಟ್ವಿಟರ್‌ಗೆ ಬರೆದ ಪತ್ರದಲ್ಲಿ ಈ ಪ್ರಸ್ತಾಪವನ್ನು ಮಾಡಿದ್ದಾರೆ ಎಂದು ರಾಯಿಟರ್ಸ್ ವರದಿ ತಿಳಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com