ಕ್ಯಾಲಿಫೋರ್ನಿಯಾ: ಕಿಡ್ನಾಪ್ ಆಗಿದ್ದ ಭಾರತೀಯ ಮೂಲದ ಕುಟುಂಬದ ನಾಲ್ಕು ಮಂದಿ ಶವವಾಗಿ ಪತ್ತೆ!

ಸೋಮವಾರ ಕಿಡ್ನಾಪ್ ಆಗಿದ್ದ ಎಂಟು ತಿಂಗಳ ಮಗು ಸೇರಿದಂತೆ  ಕುಟುಂಬದ ನಾಲ್ಕು ಮಂದಿ ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯ ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಭಾರತೀಯ ಮೂಲದ ಕುಟುಂಬ
ಭಾರತೀಯ ಮೂಲದ ಕುಟುಂಬ

ಕ್ಯಾಲಿಫೋರ್ನಿಯಾ: ಸೋಮವಾರ ಕಿಡ್ನಾಪ್ ಆಗಿದ್ದ ಎಂಟು ತಿಂಗಳ ಮಗು ಸೇರಿದಂತೆ  ಕುಟುಂಬದ ನಾಲ್ಕು ಮಂದಿ ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯ ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅಮೆರಿಕಾದಲ್ಲಿ ನೆಲೆಸಿದ್ದ ಭಾರತೀಯ ಮೂಲದ ಕುಟುಂಬದ ನಾಲ್ಕು ಮಂದಿಯನ್ನು ಸೋಮವಾರ ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಿಂದ ಅಪಹರಿಸಲಾಗಿತ್ತು. 8 ತಿಂಗಳ ಮಗು ಅರೂಹಿ ಧೇರಿ ಮತ್ತು ಆಕೆಯ ಪೋಷಕರಾದ 27 ವರ್ಷದ ಜಸ್ಲೀನ್ ಕೌರ್ ಮತ್ತು 36 ವರ್ಷದ ಜಸ್ದೀಪ್ ಸಿಂಗ್  ಹಾಗೂ ಮಗುವಿನ ಚಿಕ್ಕಪ್ಪ, 39 ವರ್ಷದ ಅಮನದೀಪ್ ಸಿಂಗ್ ಅವರನ್ನು ಅಪಹರಿಸಲಾಗಿತ್ತು.

ಮರ್ಸಿಡ್ ಕೌಂಟಿ ಶೆರಿಫ್ ವೆರ್ನ್ ವಾರ್ನ್ಕೆ ಅವರು ನಾಲ್ವರ ಶವಗಳು ಇಂಡಿಯಾನಾ ರಸ್ತೆ ಮತ್ತು ಹಚಿನ್ಸನ್ ರಸ್ತೆ ಬಳಿಯ ಹಣ್ಣಿನ ತೋಟದಲ್ಲಿ ಬುಧವಾರ ಸಂಜೆ ಪತ್ತೆಯಾಗಿವೆ. ಪೊಲೀಸರ ಪ್ರಕಾರ, ಅಧಿಕಾರಿಗಳನ್ನು ಸಂಪರ್ಕಿಸುವ ಮೊದಲು ತೋಟದ ಬಳಿಯ ರೈತ ಕಾರ್ಮಿಕರು ಶವಗಳನ್ನು ಪತ್ತೆ ಮಾಡಿದ್ದಾರೆ.

ಈ ಕುಟುಂಬವನ್ನು ಅಪಹರಿಸಿದ ಒಂದು ದಿನದ ನಂತರ, ಪೊಲೀಸರು ಶಂಕಿತ ಅಪಹರಣಕಾರನನ್ನು ಪತ್ತೆ ಮಾಡಿದ್ದರು. 48 ವರ್ಷದ ಜೀಸಸ್ ಮ್ಯಾನುಯೆಲ್ ಸಲ್ಗಾಡೊನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಜಸ್ದೀಪ್ ಸಿಂಗ್ ಕುಟುಂಬದ ಮೇಲೆ ಈ ವ್ಯಕ್ತಿಗೆ ದ್ವೇಷವಿತ್ತು ಎಂದು ಹೇಳಲಾಗಿದೆ.

ಸ್ಯಾನ್ ಫ್ರಾನ್ಸಿಸ್ಕೋದ ಆಗ್ನೇಯದಲ್ಲಿರುವ ಸ್ಯಾನ್ ಜೊವಾಕ್ವಿನ್ ವ್ಯಾಲಿಯಲ್ಲಿರುವ ಮರ್ಸಿಡ್‌ನಲ್ಲಿ ಸೋಮವಾರ ಎಂಟು ತಿಂಗಳ ಮಗು ಅರೂಹಿ ಧೇರಿ, ಅವರ ಪೋಷಕರು ಮತ್ತು ಚಿಕ್ಕಪ್ಪನನ್ನು ಅಪಹರಿಸಿದ ವ್ಯಕ್ತಿಯ ವೀಡಿಯೊವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಕಿಡ್ನಾಪ್ ಮಾಡಿದ್ದವನು ಯಾವುದೇ ರೀತಿಯ ಹಣಕ್ಕೆ ಬೇಡಿಕೆ ಇಟ್ಟಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com