ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆ

ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆಯಾಗಿದ್ದಾರೆ.
ರಿಷಿ ಸುನಕ್
ರಿಷಿ ಸುನಕ್

ಲಂಡನ್: ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. 

ರಿಷಿ ಸುನಕ್ ಬ್ರಿಟನ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದು ಸಂಜೆ 6.30ರ ಸುಮಾರಿಗೆ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಇನ್ನು ಅಕ್ಟೋಬರ್ 28ರಂದು ರಿಷಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಿಷಿ ಸುನಕ್ ಗೆ ಬರೋಬ್ಬರಿ 193 ಸಂಸದರು ಬೆಂಬಲ ನೀಡಿದ್ದು ಇನ್ನು ರಿಷಿ ಸುನಕ್ ಗೆ ಪ್ರಬಲ ಸ್ಪರ್ಧಿಯಾಗಿದ್ದ ಸಂಸದೆ ಪೆನ್ನಿ ಮೋರ್ಡಾಂಟ್ ಗೆ 26 ಸಂಸದರು ಮಾತ್ರ ಬೆಂಬಲ ನೀಡಿದ್ದು ಹೀಗಾಗಿ ಪ್ರಧಾನಿ ಹುದ್ದೆ ಸ್ಪರ್ಧೆಯಿಂದ ಮೋರ್ಡಾಂಟ್ ಹಿಂದೆ ಸರಿದಿದ್ದಾರೆ.

ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೆ ಪ್ರಧಾನಿ ರೇಸ್ ನಿಂದ ಹೊರಗುಳಿದ ನಂತರ ಅವರ ನಿಷ್ಠರಾದ ಪ್ರೀತಿ ಪಟೇಲ್ , ಭಾರತೀಯ ಸಂಜಾತ ರಿಷಿ ಸುನಕ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ಅವರು ಬ್ರಿಟನ್ ಪ್ರಧಾನಿಯಾಗುವುದು ಬಹುತೇಕ ನಿಶ್ಚಿತವಾಗಿತ್ತು. 

ಇನ್ಫೋಸಿಸ್ ನ ನಾರಾಯಣ ಮೂರ್ತಿ-ಸುಧಾ ಮೂರ್ತಿ ಅವರ ಅಳಿಯನೂ ಆಗಿರುವ ರಿಷಿ ಸುನಕ್ ಬ್ರಿಟನ್‌ನ ಮೊದಲ ಭಾರತೀಯ ಮೂಲದ ಪ್ರಧಾನಿಯಾಗಿ ಇತಿಹಾಸ ನಿರ್ಮಿಸಿದ್ದಾರೆ.

ಬ್ರಿಟನ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಕೇವಲ 45 ದಿನಗಳಲ್ಲೇ ಲಿಜ್ ಟ್ರಸ್ ರಾಜೀನಾಮೆ ನೀಡಿದ್ದರು. ಇಂಗ್ಲೆಂಡ್​ನಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಸಮಯದಲ್ಲಿ ಕನ್ಸರ್ವೇಟಿವ್ ಪಕ್ಷದ ಲಿಜ್ ಟ್ರಸ್ ಅಧಿಕಾರಕ್ಕೆ ಬಂದಿದ್ದರು. ಹೀಗಾಗಿ ಪ್ರಧಾನಿ ಪಟ್ಟದ ಜವಾಬ್ದಾರಿ ಇವರಿಗೆ ಸುಲಭದ ಹಾದಿಯಾಗಿರಲಿಲ್ಲ. ಇನ್ನು ಆರ್ಥಿಕ ಸುಧಾರಣೆ ಸಾಧ್ಯವಾಗದ ಕಾರಣ ಲಿಜ್ ಟ್ರಸ್ ರಾಜೀನಾಮೆ ನೀಡಬೇಕಾಯಿತು. ಇದೀಗ ಹೊಸದಾಗಿ ಆಯ್ಕೆಯಾಗಿರುವ ರಿಷಿ ಸುನಕ್ ಮುಂದೆ ಸಹ ದೊಡ್ಡ ಸವಾಲುಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com