ಬ್ರಿಟನ್ ನ ನಿಯೋಜಿತ ಪ್ರಧಾನಿ ರಿಷಿ ಸುನಕ್ ಗೆ ಪ್ರಧಾನಿ ಮೋದಿ, ಮಾಜಿ ಸಿಎಂ ಕುಮಾರಸ್ವಾಮಿ ಶುಭಾಶಯ

ಬ್ರಿಟನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಭಾರತ ಮೂಲದ ರಿಷಿ ಸುನಕ್​ ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಶುಭಾಶಯ ತಿಳಿಸಿದ್ದಾರೆ. 
ಪ್ರಧಾನಿ ಮೋದಿ- ರಿಷಿ ಸುನಕ್
ಪ್ರಧಾನಿ ಮೋದಿ- ರಿಷಿ ಸುನಕ್

ನವದೆಹಲಿ: ಬ್ರಿಟನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಭಾರತ ಮೂಲದ ರಿಷಿ ಸುನಕ್​ ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಶುಭಾಶಯ ತಿಳಿಸಿದ್ದಾರೆ. 

ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾದ ರಿಷಿ ಸುನಕ್​ ಗೆ ಅಭಿನಂದನೆಗಳು. ಭಾರತ-ಬ್ರಿಟನ್ ಒಗ್ಗೂಡಿ ಜಾಗತಿಕ ಸಮಸ್ಯೆಗಳು ಹಾಗೂ 2030ರ ವರೆಗಿನ ಯೋಜನೆಗಳಿಗೆ ಕ್ರಿಯಾಯೋಜನೆ ರೂಪಿಸುವುದಕ್ಕೆ ಕಾರ್ಯನಿರ್ವಹಿಸುವ ಉದ್ದೇಶವಿದೆ. ಭಾರತ-ಬ್ರಿಟನ್ ನಡುವಿನ ಐತಿಹಾಸಿಕ ಒಪ್ಪಂದಗಳು ಆಧುನಿಕ ಸಹಭಾಗಿತ್ವವಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದು, ಬ್ರಿಟನ್​ ನಲ್ಲಿರುವ ಅನಿವಾಸಿ ಭಾರತೀಯರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಶುಭಾಶಯ ಕೋರಿದ ಕುಮಾರಸ್ವಾಮಿ

ಇನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಹ ಟ್ವೀಟ್ ಮಾಡಿ ರಿಷಿ ಸುನಕ್‌ಗೆ ಶುಭಾಶಯ ಕೋರಿದ್ದಾರೆ. ರಿಷಿ ಸುನಕ್‌ ಕರ್ನಾಟಕದ ನಂಟು ಹೊಂದಿದ್ದಾರೆ. ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿರುವುದು ಅತೀವ ಸಂತಸ ಉಂಟುಮಾಡಿದೆ, ಆರ್ಥಿಕ ಸಂಕಷ್ಟ ಕಾಲದಲ್ಲಿ  ರಿಷಿ ಸುನಕ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಅವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ಮುನ್ನಡೆಸುತ್ತಾರೆಂಬ ವಿಶ್ವಾಸ ನನಗಿದೆ ಎಂದು ಹೆಚ್ ಡಿಕೆ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com