ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ

ದಕ್ಷಿಣ ಕೊರಿಯಾದಲ್ಲಿ ಭೀಕರ ದುರಂತ: 120 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!

ಶನಿವಾರ ತಡರಾತ್ರಿ ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನಲ್ಲಿ ನಡೆದ ಹ್ಯಾಲೋವೀನ್ ಆಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 120 ಮಂದಿ  ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸಿಯೋಲ್: ಶನಿವಾರ ತಡರಾತ್ರಿ ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನಲ್ಲಿ ನಡೆದ ಹ್ಯಾಲೋವೀನ್ ಆಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 120 ಮಂದಿ  ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ಇವರಲ್ಲಿ ಹಲವರು ಹೃದಯ ಸ್ತಂಭನಕ್ಕೆ ಒಳಗಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗಬಹುದು. ಇಟಾವಾನ್ ಲೆಸ್ಸರ್ ಜಿಲ್ಲೆಯ ಕಿರಿದಾದ ರಸ್ತೆಯಲ್ಲಿ ಜನಸಂದಣಿ ಜಮಾಯಿಸಿದ್ದರಿಂದ ಕಾಲ್ತುಳಿತ ಆಗಿ ಈ ಘಟನೆ ಸಂಭವಿಸಿದೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಏಜೆನ್ಸಿಯ ಅಧಿಕಾರಿ ಚೋಯ್ ಚಿಯೋನ್-ಸಿಕ್ ಹೇಳಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಘಟನಾ ಸ್ಥಳದಲ್ಲಿ ಸಂಭವಿಸಿದ ಕಾಲ್ತುಳಿತದಿಂದಾಗಿ ಹೃದಯ ಸ್ತಂಭನದಿಂದ ಬಳಲುತ್ತಿರುವ ಸುಮಾರು 50 ಜನರಿಗೆ ಸಿಪಿಆರ್ ನೀಡಲಾಗಿದೆ. ಉಸಿರಾಟದ ತೊಂದರೆ ಇರುವವರಿಂದ 81 ಕರೆಗಳು ಬಂದಿವೆ ಎಂದು ತುರ್ತು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಯುನ್ ಸುಕ್ ಯೋಲ್ ಅವರು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಉತ್ಸವದ ಸ್ಥಳಗಳ ಭದ್ರತೆಯನ್ನು ಪರಿಶೀಲಿಸುವಂತೆ ತಿಳಿಸಲಾಗಿದೆ.

ಹ್ಯಾಲೋವೀನ್ ಹಬ್ಬ ಎಂದರೇನು?
ಪಾಶ್ಚಿಮಾತ್ಯ ದೇಶಗಳಲ್ಲಿ ಹ್ಯಾಲೋವೀನ್ ಹಬ್ಬವನ್ನು ಆಚರಿಸಲಾಗುತ್ತದೆ. ಪೂರ್ವಜರ ಆತ್ಮಕ್ಕೆ ಶಾಂತಿ ಸಿಗಲೆಂದು ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂಬ ನಂಬಿಕೆ ಇದೆ. ಈ ದಿನ ಜನರು ರಾಕ್ಷಸರ ರೀತಿ ಮೇಕಪ್ ಹಾಕಿಕೊಂಡು ಭಯಾನಕ ಬಟ್ಟೆಗಳನ್ನು ಧರಿಸುತ್ತಾರೆ.

Related Stories

No stories found.

Advertisement

X
Kannada Prabha
www.kannadaprabha.com