ಎಲಾನ್ ಮಸ್ಕ್ ತೆಕ್ಕೆಗೆ ಟ್ವಿಟರ್: ಸಂತಸ ವ್ಯಕ್ತಪಡಿಸಿದ ಡೊನಾಲ್ಡ್ ಟ್ರಂಪ್

ಟೆಸ್ಲಾ ಮತ್ತು ಸ್ಪೇಸೆಕ್ಸ್‌ ಸಿಇಒ ಎಲಾನ್‌ ಮಸ್ಕ್‌ ಅವರು ಟ್ವಿಟರ್‌ಅನ್ನು ಖರೀದಿಸಿದ ಬೆನ್ನಲ್ಲೇ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಟೆಸ್ಲಾ ಮತ್ತು ಸ್ಪೇಸೆಕ್ಸ್‌ ಸಿಇಒ ಎಲಾನ್‌ ಮಸ್ಕ್‌ ಅವರು ಟ್ವಿಟರ್‌ಅನ್ನು ಖರೀದಿಸಿದ ಬೆನ್ನಲ್ಲೇ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಟ್ವಿಟರ್‌ ಇಂದು ವಿವೇಕಯುಕ್ತ ವ್ಯಕ್ತಿಯ ಕೈಯಲ್ಲಿರುವುದು ಸಂತೋಷದ ವಿಚಾರ ಎಂದು ಟ್ರಂಪ್‌ ಹೇಳಿದ್ದಾರೆ. 

ಎಲಾನ್ ಮಸ್ಕ್ ತೆಕ್ಕೆಗೆ ಟ್ವಿಟರ್ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಟ್ರಂಪ್ ಅವರ ಟ್ವಿಟರ್ ಖಾತೆ ಮೇಲಿನ ಶಾಶ್ವತ ನಿರ್ಬಂಧ ವಾಪಸ್ ತೆಗೆದುಕೊಳ್ಳಲಾಗುತ್ತದೆಯೇ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದರೆ, ಟ್ರಂಪ್ ಅವರ ಟ್ವಿಟರ್ ಖಾತೆಯನ್ನು ಇನ್ನೂ ಮರು ಸಕ್ರಿಯಗೊಳಿಸಲಾಗಿಲ್ಲ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ಹೊರಬಂದಿಲ್ಲ.

ಇದೀಗ ಟ್ರಂಪ್‌ ಅವರ ಟ್ವಿಟರ್‌ ಖಾತೆ ಮೇಲಿನ ಶಾಶ್ವತ ನಿರ್ಬಂಧವನ್ನು ವಾಪಸ್‌ ತೆಗೆದುಕೊಳ್ಳಲಾಗುತ್ತದೆಯೇ ಎಂಬ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಟ್ರಂಪ್‌ ಅವರ ಟ್ವಿಟರ್‌ ಖಾತೆಯನ್ನು ಮರು ಸಕ್ರಿಯಗೊಳಿಸುವುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಈ ನಡುವೆ ಡೊನಾಲ್ಡ್‌ ಜೆ. ಟ್ರಂಪ್‌ ಎಂಬ ವೆರಿಫೈಡ್‌ ಟ್ವಿಟರ್‌ ಖಾತೆಯಲ್ಲಿ 'ವಾಪಸ್‌ ಆಗಿದ್ದೇನೆ' ಎಂಬ ಟ್ವೀಟ್ ವೊಂದನ್ನು ಪೋಸ್ಟ್ ಮಾಡಲಾಗಿದೆ.

'ಧನ್ಯವಾದಗಳು ಎಲಾನ್‌ ಮಸ್ಕ್‌. ವಾಪಸ್‌ ಆಗುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ನನ್ನ ದ್ವೇಷಿಗರು ಮತ್ತು ಸೋತವರು ನನ್ನನ್ನು ಮಿಸ್‌ ಮಾಡಿಕೊಳ್ಳುತ್ತಿದ್ದರು ಎಂದು ಭಾವಿಸಿದ್ದೇನೆ' ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. 

ಇದನ್ನೇ ಡೊನಾಲ್ಡ್‌ ಟ್ರಂಪ್‌ ಅವರ ಖಾತೆಯೆಂದು ಭಾವಿಸಿರುವ ಕೆಲವರು ಲೈಕ್‌ ಮತ್ತು ರೀಟ್ವೀಟ್‌ ಮಾಡುತ್ತಿದ್ದಾರೆ. ಆದರೆ 89 ಮಿಲಿಯನ್‌ ಫಾಲೋವರ್ಸ್‌ ಹೊಂದಿದ್ದ ಟ್ರಂಪ್‌ ಅವರ ಅಧಿಕೃತ ಟ್ವಿಟರ್‌ ಖಾತೆ ಈಗಲೂ ಅಮಾನತಿನಲ್ಲಿರುವುದು ಕಂಡು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com