
ರಾಣಿ ಎಲಿಜಬೆತ್
ಲಂಡನ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್-II ಅವರ ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಬ್ರಿಟನ್‌ನ ಬಲ್‌ಮೋರಾಲ್‌ನಲ್ಲಿ ಸೂಕ್ತ ವೈದ್ಯಕೀಯ ನಿಗಾದಡಿ ಇದ್ದ 96 ವರ್ಷದ ರಾಣಿ ಎಲಿಜಬೆತ್- II ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ ರಾಣಿ ಎಲಿಜಬೆತ್-II ಅವರು ಈ ವಾರದ ಆರಂಭದಲ್ಲಿ ಸ್ಕಾಟ್ಲೆಂಡ್‌ನಲ್ಲಿ ಹೊಸ ಪ್ರಧಾನಿ ಲಿಜ್ ಟ್ರಸ್ ಅವರ ನೇಮಕ ಸೇರಿದಂತೆ ತಮ್ಮ ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದರು.
ಇದನ್ನು ಓದಿ: ಅನಾರೋಗ್ಯ, ವೈದ್ಯರ ನಿಗಾವಣೆಯಲ್ಲಿ ಬ್ರಿಟನ್ ರಾಣಿ ಎಲಿಜಬೆತ್!
ಎಲಿಜಬೆತ್-II ಅವರು 1953 ರಿಂದ ಬ್ರಿಟನ್ ರಾಣಿಯಾಗಿ ಸುದೀರ್ಘ ಏಳು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಎಲಿಜಬೆತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Her Majesty Queen Elizabeth II will be remembered as a stalwart of our times. She provided inspiring leadership to her nation and people. She personified dignity and decency in public life. Pained by her demise. My thoughts are with her family and people of UK in this sad hour.
— Narendra Modi (@narendramodi) September 8, 2022