ಉಕ್ರೇನ್ ಸಂಘರ್ಷ ಶೀಘ್ರದಲ್ಲೇ ಅಂತ್ಯಗೊಳಿಸಲು ಯತ್ನ: ಮೋದಿ ಕಳವಳಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭರವಸೆ

ಉಕ್ರೇನ್‌ ಜೊತೆಗಿನ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸಲು ಬಯಸಿದ್ದೇನೆ ಮತ್ತು ಈ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತದ ಕಳವಳ ಅರ್ಥವಾಗುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ಪ್ರಧಾನಿ...
ಮೋದಿ - ಪುಟಿನ್
ಮೋದಿ - ಪುಟಿನ್

ಸಮರ್ಕಂಡ್: ಉಕ್ರೇನ್‌ ಜೊತೆಗಿನ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸಲು ಬಯಸಿದ್ದೇನೆ ಮತ್ತು ಈ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತದ ಕಳವಳ ಅರ್ಥವಾಗುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ.

"ಉಕ್ರೇನ್‌ನಲ್ಲಿನ ಸಂಘರ್ಷದ ಬಗ್ಗೆ ನಿಮ್ಮ ನಿಲುವು, ನಿಮ್ಮ ಕಾಳಜಿಗಳು ನನಗೆ ಅರ್ಥವಾಗುತ್ತಿದೆ... ಇದನ್ನು ಆದಷ್ಟು ಬೇಗ ಕೊನೆಗೊಳಿಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ" ಎಂದು ಶಾಂಘೈ ಸಹಕಾರ ಸಂಘಟನೆ(SCO)ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್ ಅವರು ಪ್ರಧಾನಿ ಮೋದಿಗೆ ತಿಳಿಸಿದ್ದಾರೆ.

"ದುರದೃಷ್ಟವಶಾತ್, ಎದುರಾಳಿ ತಂಡ, ಉಕ್ರೇನ್ ನಾಯಕತ್ವ, ಸಂಧಾನ ಪ್ರಕ್ರಿಯೆಯನ್ನು ತಿರಸ್ಕರಿಸುವುದಾಗಿ ಘೋಷಿಸಿತು ಮತ್ತು ಯುದ್ಧಭೂಮಿಯಲ್ಲಿ ಮಿಲಿಟರಿ ವಿಧಾನಗಳ ಮೂಲಕ ತನ್ನ ಗುರಿಗಳನ್ನು ಸಾಧಿಸಲು ಬಯಸುವುದಾಗಿ ಹೇಳಿದೆ" ಎಂದು ಪುಟಿನ್ ತಿಳಿಸಿದರು.

ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಇದು "ಯುದ್ಧದ ಸಮಯವಲ್ಲ" ಎಂದು ಹೇಳಿದ್ದರು. ಅಲ್ಲದೆ ಶಾಂಘೈ ಸಹಕಾರ ಶೃಂಗದಲ್ಲಿ ಪ್ರಾದೇಶಿಕ, ಅಂತಾರಾಷ್ಟ್ರೀಯ ವಿಚಾರಗಳು, ಶಾಂಘೈ ಸಹಕಾರ ಸಂಘದ ವಿಸ್ತರಣೆ, ಪರಸ್ಪರ ಪ್ರಯೋಜನಕಾರಿ ಸಹಭಾಗಿತ್ವವನ್ನು ಇನ್ನಷ್ಟುಬಲಪಡಿಸುವ ಕುರಿತು ಪ್ರಧಾನಿ ಮೋದಿ ಮಾತನಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com