ಖಲಿಸ್ತಾನಿ ತೀವ್ರಗಾಮಿಗಳಿಂದ ದೇವಾಲಯ ಧ್ವಂಸ
ಖಲಿಸ್ತಾನಿ ತೀವ್ರಗಾಮಿಗಳಿಂದ ದೇವಾಲಯ ಧ್ವಂಸ

ಕೆನಡಾ: ಖಲಿಸ್ತಾನಿ ತೀವ್ರಗಾಮಿಗಳಿಂದ ದೇವಾಲಯ ಧ್ವಂಸ

ಕೆನಡಾದಲ್ಲಿ ಖಲಿಸ್ತಾನಿ ತೀವ್ರಗಾಮಿಗಳ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ ಎಂದು ಆಸ್ಟ್ರೇಲಿಯಾ ಟುಡೇ ವರದಿ ಮಾಡಿದೆ.

ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ತೀವ್ರಗಾಮಿಗಳ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ ಎಂದು ಆಸ್ಟ್ರೇಲಿಯಾ ಟುಡೇ ವರದಿ ಮಾಡಿದೆ.

ಶನಿವಾರ ತಡರಾತ್ರಿ ಖಾಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಪೋಸ್ಟರ್‌ಗಳೊಂದಿಗೆ ಕೆನಡಾದಲ್ಲಿ ತೀವ್ರಗಾಮಿಗಳ ತಂಡವೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಿವೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

'ಜೂನ್ 18ರ ಹತ್ಯೆಯಲ್ಲಿ ಭಾರತದ ಪಾತ್ರದ ಕುರಿತು ಕೆನಡಾ ತನಿಖೆ ನಡೆಸುತ್ತಿದೆ' ಎಂದು ಆಸ್ಟ್ರೇಲಿಯಾ ಟುಡೇ ಹಂಚಿಕೊಂಡಿರುವ ಟ್ವೀಟ್ ನಲ್ಲಿ ಬರೆಯಲಾಗಿದೆ. ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆಸ್ಟ್ರೇಲಿಯಾ ಟುಡೇ ಶೇರ್ ಮಾಡಿರುವ ವಿಡಿಯೋದಲ್ಲಿ ಇಬ್ಬರು ಮುಸುಕುಧಾರಿ ವ್ಯಕ್ತಿಗಳು ಪೋಸ್ಟರ್‌ಗಳನ್ನು ಅಂಟಿಸಿ, ಫೋಟೊ ತೆಗೆಸಿಕೊಂಡು ಪರಾರಿಯಾಗುತ್ತಿರುವುದನ್ನು ತೋರಿಸುತ್ತದೆ. ದೇವಾಲಯದ ದ್ವಾರದ ಮೇಲಿನ ಪೋಸ್ಟರ್‌ನಲ್ಲಿ ಈ ವರ್ಷದ ಜೂನ್‌ನಲ್ಲಿ ಕೊಲ್ಲಲ್ಪಟ್ಟ ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಮತ್ತು ನಿಯೋಜಿತ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಚಿತ್ರವೂ ಇದೆ.

Related Stories

No stories found.

Advertisement

X
Kannada Prabha
www.kannadaprabha.com