ಮುಂಬೈ ಉಗ್ರ ದಾಳಿಯ ಆರೋಪಿ ತಹವ್ವುರ್ ರಾಣಾ ಅರ್ಜಿ ತಿರಸ್ಕರಿಸಿದ ಅಮೆರಿಕ ಕೋರ್ಟ್; ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರ

2008ರ ಮುಂಬೈ ಭಯೋತ್ಪಾದನಾ ದಾಳಿಯ ಸಂಚು ಆರೋಪಿ ತಹವ್ವುರ್ ಹುಸೇನ್ ರಾಣಾನನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರುವ ಸಾಧ್ಯತೆ ಇದೆ. ಪಾಕಿಸ್ತಾನಿ ಮೂಲದ ಈ ಕೆನಡಾದ ಉದ್ಯಮಿಯ ಮನವಿಯನ್ನು ಅಮೆರಿಕಾ ನ್ಯಾಯಾಲಯ ತಿರಸ್ಕರಿಸಿದೆ.
ತಹವ್ವುರ್ ಹುಸೇನ್ ರಾಣಾ
ತಹವ್ವುರ್ ಹುಸೇನ್ ರಾಣಾ

2008ರ ಮುಂಬೈ ಭಯೋತ್ಪಾದನಾ ದಾಳಿಯ ಸಂಚು ಆರೋಪಿ ತಹವ್ವುರ್ ಹುಸೇನ್ ರಾಣಾನನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರುವ ಸಾಧ್ಯತೆ ಇದೆ. ಪಾಕಿಸ್ತಾನಿ ಮೂಲದ ಈ ಕೆನಡಾದ ಉದ್ಯಮಿಯ ಮನವಿಯನ್ನು ಅಮೆರಿಕಾ ನ್ಯಾಯಾಲಯ ತಿರಸ್ಕರಿಸಿದೆ. ಈ ಅರ್ಜಿಯಲ್ಲಿ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಎಂದು ಯುಎಸ್ ಸರ್ಕಾರಕ್ಕೆ ಮನವಿ ಮಾಡಿದ್ದರು.

ಅಮೆರಿಕದ ನ್ಯಾಯಾಲಯ ಅವರಿಗೆ ಯಾವುದೇ ಪರಿಹಾರ ನೀಡಲು ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಭಾರತಕ್ಕೆ ಕರೆತರಲು ಅಮೆರಿಕದ ವಿದೇಶಾಂಗ ಸಚಿವಾಲಯ ಅನುಮತಿ ಪಡೆಯುತ್ತಿದೆಯಂತೆ. ತಹವ್ವುರ್ ರಾಣಾ ಭಾರತದಲ್ಲಿ ನಡೆದ ಮುಂಬೈ ಭಯೋತ್ಪಾದನಾ ದಾಳಿಯ ಸಂಚು ರೂಪಿಸಿದ ಆರೋಪಿ. ಆದರೆ, ಈ ಆದೇಶದ ವಿರುದ್ಧ ತಹವ್ವೂರ್ ಮೇಲ್ಮನವಿ ಸಲ್ಲಿಸಿದ್ದಾರೆ. ಮೇಲ್ಮನವಿಯಲ್ಲಿ, ಅವರು ತನ್ನ ಮನವಿಯನ್ನು ಮತ್ತೊಂದು ನ್ಯಾಯಾಲಯದಲ್ಲಿ ವಿಚಾರಣೆ ಮಾಡುವವರೆಗೆ ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ಕೋರಿದ್ದಾರೆ.

ಇದು ನಮಗೆ ಬಾಕಿ ಉಳಿದಿರುವ ವಿಚಾರ ಎಂದು ಅಮೆರಿಕ ಸರ್ಕಾರದ ಉಪ ವಕ್ತಾರ ವೇದಾಂತ್ ಪಟೇಲ್ ಹೇಳಿದ್ದಾರೆ. ಅವರು, 'ಅಮೆರಿಕ ಸರ್ಕಾರ ಇಡೀ ವಿಶ್ವದಲ್ಲಿ ಭಯೋತ್ಪಾದನೆ ವಿರುದ್ಧವಾಗಿದೆ. ಭಾರತದಲ್ಲಿ 26/11 ಮುಂಬೈ ದಾಳಿಯನ್ನು ನಾವು ಖಂಡಿಸುತ್ತೇವೆ. ಅಮೆರಿಕ ಯಾವಾಗಲೂ ಭಯೋತ್ಪಾದಕರ ವಿರುದ್ಧವಾಗಿದೆ. ಭಯೋತ್ಪಾದನೆ ವಿರುದ್ಧದ ಎಲ್ಲಾ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

ಪ್ರತ್ಯೇಕ ಆದೇಶದ ಮೂಲಕ ತಹವ್ವುರ್ ರಾಣಾ ಅವರ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿದೆ ಎಂದು ಕೊಲಂಬಿಯಾದ ಸೆಂಟ್ರಲ್ ಡಿಸ್ಟ್ರಿಕ್ಟ್‌ನ ಯುನೈಟೆಡ್ ಸ್ಟೇಟ್ಸ್ ಡಿಸ್ಟ್ರಿಕ್ಟ್‌ನ ನ್ಯಾಯಾಧೀಶ ಡೇಲ್ ಎಸ್. ಫಿಶರ್ ಅವರು ಆಗಸ್ಟ್ 10ರಂದು ತಮ್ಮ ಆದೇಶದಲ್ಲಿ ಬರೆದಿದ್ದಾರೆ. ತನ್ನ ಅರ್ಜಿಯಲ್ಲಿ ಎರಡು ಮೂಲಭೂತ ವಾದಗಳನ್ನು ಮಂಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com