ನೇಪಾಳದಲ್ಲಿ ನದಿಗೆ ಉರುಳು ಬಿದ್ದ ಬಸ್: 6 ಮಂದಿ ಭಾರತೀಯರು ಸೇರಿ 7 ಜನರ ಸಾವು, 19 ಜನರಿಗೆ ಗಾಯ

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿo ಬಸ್​ ಒಂದು ನದಿಗೆ ಬಿದ್ದ ಪರಿಣಾಮ 6 ಮಂದಿ ಭಾರತೀಯರು ಸೇರಿ 7 ಮಂದಿ ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಠ್ಮಂಡು: ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿo ಬಸ್​ ಒಂದು ನದಿಗೆ ಬಿದ್ದ ಪರಿಣಾಮ 6 ಮಂದಿ ಭಾರತೀಯರು ಸೇರಿ 7 ಮಂದಿ ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಉರುಳಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ 6 ಮಂದಿ ಭಾರತೀಯ ಯತ್ರಾರ್ಥಿಗಳು ಸೇರಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಗಾಯಗೊಂಡ 19ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ ಕಠ್ಮಂಡುವಿನಿಂದ ಬೇನಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಕಠ್ಮಂಡುವಿನಿಂದ ರಮಣೀಯ ನಗರವಾದ ಪೊಖರಾಗೆ ತೆರಳುತ್ತಿದ್ದ ಬಸ್ಸು ಪ್ರಾಂತದ ಧಾಡಿಂಗ್ ಜಿಲ್ಲೆಯ ಚಾಲೀಸ್‌ನಲ್ಲಿ ತ್ರಿಶೂಲಿ ನದಿಗೆ ಬಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತದ ನಂತರ ಬಸ್ ತ್ರಿಶೂಲಿ ನದಿಯಲ್ಲಿ ಭಾಗಶಃ ಮುಳುಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಗಾರಿನಿಂದಾಗಿ ನದಿಯ ನೀರಿನ ಮಟ್ಟ ಹೆಚ್ಚಾಗಿತ್ತು ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com