ಶಿಕ್ಷೆ ಅಮಾನತ್ತಾದರೂ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ: ಕಾನೂನು ತಜ್ಞರು

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಾನೂನು ತಂಡವು ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಕಾರಣವಾದ ಆಗಸ್ಟ್ 5ರ ತೀರ್ಪನ್ನು ಅಮಾನತುಗೊಳಿಸುವಂತೆ ವಿನಂತಿಸದೆ ಮಹತ್ವದ ತಪ್ಪು ಮಾಡಿದೆ.
ಇಮ್ರಾನ್ ಖಾನ್
ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಾನೂನು ತಂಡವು ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಕಾರಣವಾದ ಆಗಸ್ಟ್ 5ರ ತೀರ್ಪನ್ನು ಅಮಾನತುಗೊಳಿಸುವಂತೆ ವಿನಂತಿಸದೆ ಮಹತ್ವದ ತಪ್ಪು ಮಾಡಿದೆ. ಉನ್ನತ ನ್ಯಾಯಾಲಯವು ಮೂರು ವರ್ಷಗಳ ಶಿಕ್ಷೆಯನ್ನು ಅಮಾನತುಗೊಳಿಸಿದ್ದರೂ ಪಾಕಿಸ್ತಾನದ ಮಾಜಿ ಪ್ರಧಾನಿ ಜೈಲಿನಲ್ಲೇ ಉಳಿದಿದ್ದಾರೆ ಎಂದು ಪ್ರಮುಖ ವಕೀಲರು ಹೇಳಿದ್ದಾರೆ.

ಇಸ್ಲಾಮಾಬಾದ್ ಹೈಕೋರ್ಟ್‌ನ ಆದೇಶದ ಹೊರತಾಗಿಯೂ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ 70 ವರ್ಷ ವಯಸ್ಸಿನ ಅಧ್ಯಕ್ಷರು ಅಟಾಕ್ ಜೈಲಿನಲ್ಲಿಯೇ ಉಳಿದಿದ್ದು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ಏಕೆಂದರೆ ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ಶಿಕ್ಷೆ ಮತ್ತು ಅನರ್ಹತೆ ಹಾಗೇ ಉಳಿದಿದೆ ಎಂದು ಕಾನೂನು ತಜ್ಞರ ಹೇಳಿದ್ದಾರೆ.

ವಿಚಾರಣಾ ನ್ಯಾಯಾಲಯದ ಆಗಸ್ಟ್ 5ರ ತೀರ್ಪನ್ನು ಅಮಾನತುಗೊಳಿಸುವಂತೆ ವಿನಂತಿಸದೆ ಇಮ್ರಾನ್ ಖಾನ್ ಅವರ ಕಾನೂನು ತಂಡವು ಗಮನಾರ್ಹ ತಪ್ಪು ಮಾಡಿದೆ. ಕಾನೂನು ತಂಡ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಮತ್ತು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಮಾತ್ರ ವಿನಂತಿಸಿದ್ದಾರೆ ಎಂದು ವಕೀಲ ಫೈಸಲ್ ಸಿದ್ದಿಕಿ ಪ್ರತಿಕ್ರಿಯಿಸಿದ್ದಾರೆ.

ವಿಚಾರಣಾ ನ್ಯಾಯಾಲಯದ ತೀರ್ಪನ್ನು ಅಮಾನತುಗೊಳಿಸುವಂತೆ ಮನವಿ ಮಾಡಿದ್ದರೆ, ಇಸ್ಲಾಮಾಬಾದ್ ಹೈಕೋರ್ಟ್ ಪ್ರಕರಣದ ಅರ್ಹತೆಗಳ ಬಗ್ಗೆ ವ್ಯಾಪಕವಾಗಿ ಚರ್ಚಿಸುತ್ತಿತ್ತು. ವಿಚಾರಣಾ ನ್ಯಾಯಾಲಯದ ತೀರ್ಪನ್ನು ಅಮಾನತುಗೊಳಿಸಿದ್ದರೆ, ಇಮ್ರಾನ್ ಖಾನ್ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಬಹುದಿತ್ತು ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆಯು ಸಿದ್ದಿಕಿ ಹೇಳಿಕೆಯನ್ನು ಉಲ್ಲೇಖಿಸಿದೆ.

ಇಸ್ಲಾಮಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ಮತ್ತು ನ್ಯಾಯಮೂರ್ತಿ ತಾರಿಕ್ ಮೆಹಮೂದ್ ಜಹಾಂಗಿರಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಬುಧವಾರ ಖಾನ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿ, ಪಂಜಾಬ್ ಪ್ರಾಂತ್ಯದ ಜೈಲಿನಿಂದ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com