ಲಂಡನ್: ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ಥೇಮ್ಸ್ ನದಿಯಲ್ಲಿ ಪತ್ತೆ!

ನವೆಂಬರ್ 17ರಿಂದ ಆತ ಕಾಣೆಯಾಗಿದ್ದ. ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿಯ ಥೇಮ್ಸ್ ನದಿಯಲ್ಲಿ ಪತ್ತೆಯಾದ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಸಾವು ಸಂಶಯಾಸ್ಪದವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಿತ್ಕುಮಾರ್ ಪಟೇಲ್
ಮಿತ್ಕುಮಾರ್ ಪಟೇಲ್

ಲಂಡನ್: ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತ ಮೂಲದ 23 ವರ್ಷದ ವಿದ್ಯಾರ್ಥಿ ಇಲ್ಲಿನ ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವಿದ್ಯಾರ್ಥಿಯನ್ನು ಮಿತ್ಕುಮಾರ್ ಪಟೇಲ್ ಎಂದು ಗುರುತಿಸಲಾಗಿದ್ದು, ಸೆಪ್ಟೆಂಬರ್‌ನಲ್ಲಿ ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ಬಂದಿದ್ದರು.

ನವೆಂಬರ್ 17ರಿಂದ ಆತ ಕಾಣೆಯಾಗಿದ್ದ. ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿಯ ಥೇಮ್ಸ್ ನದಿಯಲ್ಲಿ ಪತ್ತೆಯಾದ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಸಾವು ಸಂಶಯಾಸ್ಪದವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನಮ್ಮೆಲ್ಲರಿಗೂ ದುಃಖವಾಯಿತು. ಆದ್ದರಿಂದ, ನಾವು ಅವರ ಕುಟುಂಬಕ್ಕೆ ಸಹಾಯ ಮಾಡಲು ಮತ್ತು ಆತನ ದೇಹವನ್ನು ಭಾರತಕ್ಕೆ ಕಳುಹಿಸಲು ನಿಧಿ ಸಂಗ್ರಹಿಸಲು ನಿರ್ಧರಿಸಿದ್ದೇವೆ ಎಂದು ಸಂಬಂಧಿ ಪಾರ್ಥ್‌ ಪಟೇಲ್‌ ತಿಳಿಸಿದ್ದಾರೆ. ಈವರೆಗೆ ಅವರು 4,000 ಪೌಂಡ್ ದೇಣಿಗೆ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಈವ್ನಿಂಗ್ ಸ್ಟ್ಯಾಂಡರ್ಡ್ ಪತ್ರಿಕೆಯ ಪ್ರಕಾರ, ವಿದ್ಯಾರ್ಥಿಯು ನವೆಂಬರ್ 20 ರಂದು ಶೆಫೀಲ್ಡ್ ಹಾಲಮ್ ವಿಶ್ವವಿದ್ಯಾಲಯದಲ್ಲಿ ಪದವಿ ವಿದ್ಯಾಭ್ಯಾಸ ಆರಂಭಿಸಿದ್ದ. ಜೊತೆಗೆ ಅಮೆಜಾನ್‌ನಲ್ಲಿ ಅರೆಕಾಲಿಕ ಉದ್ಯೋಗ ಪ್ರಾರಂಭಿಸುವ ಯೋಜಿಸಿದ್ದರು. ಲಂಡನ್‌ನಲ್ಲಿ ದೈನಂದಿನ ವಾಕಿಂಗ್‌ಗೆ ತೆರಳಿದ್ದ ಪಟೇಲ್ ಹಿಂದಿರುಗಿರಲಿಲ್ಲ.

ರೈತಾಪಿ ಕುಟುಂಬದಿಂದ ಬಂದಿರುವ ಪಟೇಲ್, ನವೆಂಬರ್ 17, 2023ರಿಂದ ಕಾಣೆಯಾಗಿದ್ದರು. ಈಗ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇದು ಅತ್ಯಂತ ದುಃಖಕರ ವಿಷಯ. ದೇಣಿಗೆ ಸಂಗ್ರಹಿಸಿ ಅವರ ಕುಟುಂಬಕ್ಕೆ ನೆರವು ನೀಡಲು ಇಚ್ಛಿಸುತ್ತಿದ್ದೇನೆ ಎಂದು ಪಾರ್ಥ ಪಟೇಲ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com