ಇಸ್ರೇಲ್ ವಾಯುದಾಳಿಯ ಸಾಂದರ್ಭಿಕ ಚಿತ್ರ
ವಿದೇಶ
ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವಾಯುದಾಳಿ: 70 ಜನರ ಸಾವು
ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಸುಮಾರು 70 ಜನರು ಪ್ಯಾಲೆಸ್ಟೇನಿಯನ್ನರು ಸಾವನ್ನಪ್ಪಿದ್ದಾರೆ.
ಗಾಜಾ: ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಯುದ್ಧ ಮುಂದುವರೆದಿದ್ದು, ಭಾನುವಾರ ತಡರಾತ್ರಿ, ಕ್ರಿಸ್‌ಮಸ್ ದಿನದಂದು ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಸುಮಾರು 70 ಜನರು ಪ್ಯಾಲೆಸ್ಟೇನಿಯನ್ನರು ಸಾವನ್ನಪ್ಪಿದ್ದಾರೆ. ಹಮಾಸ್ ನಡೆಸುತ್ತಿರುವ ಆರೋಗ್ಯ ಇಲಾಖೆ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ.
ಭಾನುವಾರ ತಡರಾತ್ರಿ ಆರಂಭವಾದ ವಾಯುದಾಳಿ, ಕ್ರಿಸ್ಮಸ್ ದಿನವಾದ ಸೋಮವಾರದವರೆಗೂ ನಡೆದಿದೆ. ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿರುವ ಜನರ ಸಂಖ್ಯೆಯನ್ನು ಪರಿಗಣಿಸಿ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ವರದಿ ಹೇಳಿದೆ.
ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ