ಕೆನಡಾದ ಲಖ್ಬೀರ್ ಸಿಂಗ್ ಲಾಂಡಾ ‘ಭಯೋತ್ಪಾದಕ’: ಭಾರತ ಘೋಷಣೆ

ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಚಟುವಟಿಕೆ ನಡೆಸುತ್ತಿದ್ದ ಖಲಿಸ್ತಾನಿ ಲಖ್ಬೀರ್ ಸಿಂಗ್ ಲಾಂಡಾನನ್ನು ಭಯೋತ್ಪಾದಕ ಎಂದು ಭಾರತದ ಕೇಂದ್ರ ಗೃಹ ಸಚಿವಾಲಯ ಘೋಷಿಸಿದ್ದು, ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ.
ಲಖ್ಬೀರ್ ಸಿಂಗ್ ಲಾಂಡಾ
ಲಖ್ಬೀರ್ ಸಿಂಗ್ ಲಾಂಡಾ
Updated on

ನವದೆಹಲಿ: ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಚಟುವಟಿಕೆ ನಡೆಸುತ್ತಿದ್ದ ಖಲಿಸ್ತಾನಿ ಲಖ್ಬೀರ್ ಸಿಂಗ್ ಲಾಂಡಾನನ್ನು ಭಯೋತ್ಪಾದಕ ಎಂದು ಭಾರತದ ಕೇಂದ್ರ ಗೃಹ ಸಚಿವಾಲಯ ಘೋಷಿಸಿದ್ದು, ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ.

1989 ರಲ್ಲಿ ಪಂಜಾಬ್‍ನ ತರ್ನ್ ತರನ್ ಜಿಲ್ಲೆಯಲ್ಲಿ ಜನಿಸಿದ ಲಾಂಡಾ,2017 ರಲ್ಲಿ ಕೆನಡಾಕ್ಕೆ ಪರಾರಿಯಾಗಿದ್ದ. ಈತನನ್ನು ಕುಖ್ಯಾತ ಖಲಿಸ್ತಾನಿ ಗುಂಪಿನ ಬಬ್ಬರ್ ಖಾಲ್ಸಾ ಇಂಟರ್‍ನ್ಯಾಶನಲ್ ಸದಸ್ಯ ಎಂದು ಗುರುತಿಸಲಾಗುತ್ತಿದೆ.

ಲಾಂಡಾ ಬಿಕೆಐ ಯೊಂದಿಗೆ ಸಹಕರಿಸಿದ ಪಾಕಿಸ್ತಾನ ಮೂಲದ ದರೋಡೆಕೋರ ರಿಂಡಾ ಎಂದೂ ಕರೆಯಲ್ಪಡುವ ಹರ್ವಿಂದರ್ ಸಿಂಗ್ ಅವರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆಂದು ನಂಬಲಾಗಿದೆ.

ಈತ ಮೊಹಾಲಿಯಲ್ಲಿ ನಡೆದ ರಾಕೆಟ್ ದಾಳಿಗೆ ಲಾಂಡಾ ಹೊಣೆಗಾರನಾಗಿದ್ದು, ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ವಿವಿಧ ಘಟಕಗಳಿಗೆ ಸುಧಾರಿತ ಸ್ಪೋಟಕ ಸಾಧನಗಳು (ಐಇಡಿಗಳು), ಶಸ್ತ್ರಾಸ್ತ್ರಗಳು, ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಸ್ಪೋಟಕಗಳನ್ನು ಗಡಿಯಾಚೆಯಿಂದ ಸರಬರಾಜು ಮಾಡುವಲ್ಲಿ ತೊಡಗಿಸಿಕೊಂಡಿದ್ದಾನೆನ್ನಲಾಗಿದೆ.

ಭಯೋತ್ಪಾದನಾ ಘಟಕಗಳ ರಚನೆ, ಸುಲಿಗೆ, ಹತ್ಯೆಗಳು, ಐಇಡಿಗಳನ್ನು ನೆಡುವುದು, ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳ ಕಳ್ಳಸಾಗಣೆ ಮತ್ತು ಪಂಜಾಬ್‍ನಲ್ಲಿ ಮಾತ್ರವಲ್ಲದೆ ಇತರ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಬಳಸುವುದಕ್ಕೆ ಸಂಬಂಧಿಸಿದ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಲಾಂಡಾ ಭಾಗಿಯಾಗಿದ್ದಾರೆ ಎಂದು ಗೃಹ ಸಚಿವಾಲಯ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

ಲಾಂಡಾ ಅವರು ಕೆನಡಾ ಮೂಲದ ಹಲವಾರು ಖಲಿಸ್ತಾನಿ ಭಯೋತ್ಪಾದಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು, ಸಿಖ್ಸ್ ಫಾರ್ ಜಸ್ಟಿಸ್‍ನ ಗುರುಪತ್‍ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ನ ದಿವಂಗತ ಹರ್ದೀಪ್ ಸಿಂಗ್ ನಿಜ್ಜರ್ ಸೇರಿದಂತೆ ಇತರರು ಸೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com