ನವದೆಹಲಿ: ಹೊಸ ವರ್ಷ 2024 ಬರಮಾಡಿಕೊಳ್ಳಲು ವಿಶ್ವದಾದ್ಯಂತ ಜನರು ಪಾರ್ಟಿ, ಮೋಜು ಮಸ್ತಿಯಲ್ಲಿ ತೊಡಗಿರುವಂತೆಯೇ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಸೇರಿದಂತೆ ಕೆಲವು ದೇಶಗಳ ಜನತೆ ಈಗಾಗಲೇ ನೂತನ ವರ್ಷವನ್ನು ಸ್ವಾಗತಿಸಿದ್ದಾರೆ.
ಆಸ್ಟ್ರೇಲಿಯಾದ ಸಿಡ್ನಿಯ ಒಪೆರಾ ಹೌಸ್ ಬಳಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನರು ಚಿತ್ತಾಕರ್ಷಕ ಬಾಣ ಬಿರುಸುಗಳನ್ನು ಸಿಡಿಸಿ ಹೊಸ ವರ್ಷವನ್ನು ಬರಮಾಡಿಕೊಂಡರು.
ಜಪಾನ್, ದಕ್ಷಿಣ ಕೊರಿಯಾ ಮತ್ತಿತರ ರಾಷ್ಟ್ರಗಳು ನೂತನ ವರ್ಷ ಬರಮಾಡಿಕೊಂಡು ಸಂಭ್ರಮಿಸಿದ್ದಾರೆ. ಇತ್ತ ಭಾರತದಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಮುಗಿಲು ಮುಟ್ಟಿದ್ದು, ಪ್ರವಾಸಿ ತಾಣಗಳು, ಹೋಟೆಲ್, ರೆಸಾರ್ಟ್ ,ರೆಸ್ಟೊರೆಂಟ್ ಗಳು ವಿದ್ಯುತ್ ದೀಪಾಲಂಕಾರಗಳಿಂದ ಝಗಮಗಿಸುತ್ತಿದ್ದು, ಜನರಿಂದ ತುಂಬಿ ತುಳುಕುತ್ತಿವೆ.
Advertisement