ಫೇಸ್‌ಬುಕ್ ಸ್ನೇಹಿತನನ್ನು ಮದುವೆಯಾದ ಪಾಕ್ ಗೆ ತೆರಳಿದ್ದ ಭಾರತದ ಮಹಿಳೆ, ಇಸ್ಲಾಂಗೆ ಮತಾಂತರ!

ಫೇಸ್ ಬುಕ್ ಸ್ನೇಹಿತನನ್ನು ಭೇಟಿ ಮಾಡಲು ಪಾಕಿಸ್ತಾನದ ದೂರದ ಹಳ್ಳಿಗೆ ತೆರಳಿದ್ದ ಭಾರತದ, ಇಬ್ಬರು ಮಕ್ಕಳ ತಾಯಿ ಅಂಜು ಅವರು ಮಂಗಳವಾರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. 
ಅಂಜು ಹಾಗೂ ನಸ್ರುಲ್ಲಾ
ಅಂಜು ಹಾಗೂ ನಸ್ರುಲ್ಲಾ

ಪೇಶಾವರ: ಫೇಸ್ ಬುಕ್ ಸ್ನೇಹಿತನನ್ನು ಭೇಟಿ ಮಾಡಲು ಪಾಕಿಸ್ತಾನದ ದೂರದ ಹಳ್ಳಿಗೆ ತೆರಳಿದ್ದ ಭಾರತದ, ಇಬ್ಬರು ಮಕ್ಕಳ ತಾಯಿ ಅಂಜು ಅವರು ಮಂಗಳವಾರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ನಂತರ ತನ್ನ ಫೇಸ್‌ಬುಕ್ ಸ್ನೇಹಿತನೊಂದಿಗೆ ಮದುವೆಯಾಗಿದ್ದು, ಅಂಜು ತನ್ನ ಹೆಸರನ್ನು ಈಗ ಫಾತಿಮಾ ಎಂದು ಬದಲಾಯಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದ ಕೈಲೋರ್ ಗ್ರಾಮದಲ್ಲಿ ಜನಿಸಿ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದ 34 ವರ್ಷದ ಅಂಜು ತನ್ನ 29 ವರ್ಷದ ಪಾಕಿಸ್ತಾನಿ ಸ್ನೇಹಿತ ನಸ್ರುಲ್ಲಾನನ್ನು ಭೇಟಿಯಾಗಲು ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಅಪ್ಪರ್ ದಿರ್ ಜಿಲ್ಲೆಗೆ ತೆರಳಿದ್ದಾರೆ.

ಇಬ್ಬರೂ 2019 ರಲ್ಲಿ ಫೇಸ್‌ಬುಕ್‌ನಲ್ಲಿ ಸ್ನೇಹಿತರಾಗಿದ್ದರು. ಈಗ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಅಪ್ಪರ್ ದಿರ್ ಜಿಲ್ಲೆಯ ಸ್ಥಳೀಯ ನ್ಯಾಯಾಲಯದಲ್ಲಿ ಮದುವೆಯಾಗಿದ್ದಾರೆ ಎಂದು ವರದಿಯಾಗಿದೆ.

"ನಸ್ರುಲ್ಲಾ ಮತ್ತು ಅಂಜು ಅವರ ವಿವಾಹವನ್ನು ಇಂದು ಅಧಿಕೃತ ನಡೆಸಲಾಯಿತು ಮತ್ತು ಅವರು ಇಸ್ಲಾಂಗೆ ಮತಾಂತರಗೊಂಡ ನಂತರ ಸರಿಯಾದ ನಿಕ್ಕಾ ನಡೆಸಲಾಯಿತು" ಎಂದು ಅಪ್ಪರ್ ದಿರ್ ಜಿಲ್ಲೆಯ ಮೊಹರಾರ್ ನಗರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಮುಹಮ್ಮದ್ ವಹಾಬ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ನಸ್ರುಲ್ಲಾ ಅವರ ಕುಟುಂಬ ಸದಸ್ಯರು, ಪೊಲೀಸ್ ಸಿಬ್ಬಂದಿ ಮತ್ತು ವಕೀಲರ ಸಮ್ಮುಖದಲ್ಲಿ ಅಪ್ಪರ್ ದಿರ್‌ನ ನ್ಯಾಯಾಲಯದಲ್ಲಿ ಇಬ್ಬರೂ ಮದುವೆಯಾಗಿದ್ದಾರೆ.

ಮಲಕಂದ್ ವಿಭಾಗದ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ನಾಸಿರ್ ಮೆಹಮೂದ್ ಸತ್ತಿ ಅವರು, ಈ ನಿಕ್ಕಾವನ್ನು ಖಚಿತಪಡಿಸಿದ್ದು, ಭಾರತೀಯ ಮಹಿಳೆ ಅಂಜು ಇಸ್ಲಾಂಗೆ ಮತಾಂತರಗೊಂಡ ನಂತರ ಫಾತಿಮಾ ಎಂದು ಹೆಸರಿಟ್ಟುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com