9 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

ತಮಿಳುನಾಡಿನ ಮಂಡಪಂ ನಿವಾಸಿಗಳಾದ ಮೀನುಗಾರರು ಅಂತರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ ಎಂದು ರಾಜ್ಯ ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಲೊಂಬೋ: ಸಮುದ್ರದ ಗಡಿಯನ್ನು ಉಲ್ಲಂಘಿಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.

ತಮಿಳುನಾಡಿನ ಮಂಡಪಂ ನಿವಾಸಿಗಳಾದ ಮೀನುಗಾರರು ಅಂತರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ ಎಂದು ರಾಜ್ಯ ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.

ಮೀನುಗಾರರು ಸೋಮವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದರು ಮತ್ತು ನಿನ್ನೆ ತಡರಾತ್ರಿ ಕಚ್ಚತೀವು ಮತ್ತು ನೆಡುಂತೀವು ನಡುವೆ ಬಂಧಿಸಲಾಗಿದೆ ಎರಡು ಯಾಂತ್ರೀಕೃತ ದೋಣಿಗಳನ್ನೂ ವಶಪಡಿಸಿಕೊಳ್ಳಲಾಗಿದೆ ಹೇಳಿದ್ದಾರೆ.  ಈ ತಿಂಗಳಿನಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಶ್ರೀಲಂಕಾ ನೌಕಾಪಡೆ ಮತ್ತು ಕರಾವಳಿ ಸಿಬ್ಬಂದಿ ಜುಲೈ 24 ರ ರಾತ್ರಿ ಶ್ರೀಲಂಕಾದ ಸಮುದ್ರದಿಂದ ಭಾರತೀಯ ಮೀನುಗಾರರನ್ನು ಓಡಿಸಲು ವಿಶೇಷ ಕಾರ್ಯಾಚರಣೆ ನಡೆಸಿದರು" ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ವಿದೇಶಿ ಮೀನುಗಾರಿಕಾ ಟ್ರಾಲರ್‌ಗಳ ಅಕ್ರಮ ಮೀನುಗಾರಿಕೆ  ತಡೆಯಲು ನೌಕಾಪಡೆಯು ಶ್ರೀಲಂಕಾದ ನೀರಿನಲ್ಲಿ ನಿಯಮಿತ ಗಸ್ತು ತಿರುಗುತ್ತಿದ್ದು ರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ಹೇಳಿಕೆ ತಿಳಿಸಿದೆ.

ಕಳೆದ ವಾರ ಶ್ರೀಲಂಕಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರನಿಲ್ ವಿಕ್ರಮಸಿಂಘೆ ನಡುವಿನ ಮಾತುಕತೆಯ ಸಂದರ್ಭದಲ್ಲೂ ಮೀನುಗಾರರ ಸಮಸ್ಯೆ ಕಾಣಿಸಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com