ಪ್ರಧಾನಿ ಮೋದಿ ಅಮೆರಿಕ ಪ್ರವಾಸ: ಜೂನ್ 22 ರಂದು ಜೋ-ಬೈಡನ್ ದಂಪತಿಯಿಂದ ಆತಿಥ್ಯ!

ಪ್ರಧಾನಿ ನರೇಂದ್ರ ಮೋದಿ ಅವರ ಮುಂಬರುವ ಅಮೆರಿಕ ಪ್ರವಾಸದ ವೇಳಾಪಟ್ಟಿ ಬಿಡುಗಡೆಯಾಗಿದೆ.  ಜೂನ್ 21 ರಂದು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ-ಬೈಡನ್ ಅವರೊಂದಿಗೆ ಪ್ರಧಾನಿ ಮೋದಿ
ಅಮೆರಿಕ ಅಧ್ಯಕ್ಷ ಜೋ-ಬೈಡನ್ ಅವರೊಂದಿಗೆ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮುಂಬರುವ ಅಮೆರಿಕ ಪ್ರವಾಸದ ವೇಳಾಪಟ್ಟಿ ಬಿಡುಗಡೆಯಾಗಿದೆ.  ಜೂನ್ 21 ರಂದು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜೂನ್ 22 ರಂದು ಮೋದಿ ತಮ್ಮ ಉನ್ನತ ಮಟ್ಟದ ಮಾತುಕತೆ ಮುಂದುವರೆಸಲು ವಾಷಿಂಗ್ಟನ್‌ನಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರನ್ನು ಭೇಟಿಯಾಗಲಿದ್ದಾರೆ. ನಂತರ ಅವರು ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅಂದು ಸಂಜೆ ಅಧ್ಯಕ್ಷ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಟೇಟ್ ಡಿನ್ನರ್ ಆಯೋಜಿಸಲಿದ್ದಾರೆ. 23 ರಂದು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬಿಲ್ನ್‌ಕೆನ್ ಅವರು ಭೋಜನ ಕೂಟವನ್ನು ಆಯೋಜಿಸಲಿದ್ದಾರೆ. ಪ್ರಮುಖ ಸಿಇಒಗಳು, ವೃತ್ತಿಪರರು, ಇತರ ಮಧ್ಯಸ್ಥಗಾರರೊಂದಿಗೆ ಮೋದಿ ಹಲವಾರು ಸಂವಾದಗಳನ್ನು ನಡೆಸಲು ನಿರ್ಧರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com