ಅಪಘಾತದ ನಂತರದ ದೃಶ್ಯ
ವಿದೇಶ
ಗ್ರೀಸ್ ನಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ: 32 ಮಂದಿ ಸಾವು, 85ಕ್ಕೂ ಹೆಚ್ಚು ಮಂದಿಗೆ ಗಾಯ
ಗ್ರೀಸ್ನಲ್ಲಿ ಕಳೆದ ರಾತ್ರಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 32 ಮಂದಿ ಮೃತಪಟ್ಟಿದ್ದು, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಅಥೆನ್ಸ್: ಗ್ರೀಸ್ನಲ್ಲಿ ಕಳೆದ ರಾತ್ರಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 32 ಮಂದಿ ಮೃತಪಟ್ಟಿದ್ದು, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಗ್ರೀಸ್ ರಾಜಧಾನಿ ಅಥೆನ್ಸ್ ಮತ್ತು ಥೆಸಲೋನಿಕಿ ನಡುವೆ ಅಥೆನ್ಸ್‌ನಿಂದ ಉತ್ತರಕ್ಕೆ 235 ಮೈಲುಗಳಷ್ಟು ದೂರದಲ್ಲಿರುವ ಟೆಂಪಿ ಬಳಿ ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಹಲವು ಬೋಗಿಗಳು ಹಳಿತಪ್ಪಿದ್ದು, ಈ ಪೈಕಿ 3 ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ 32 ಜನರು ಮೃತಪಟ್ಟು ಕನಿಷ್ಠ 85 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 25 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು ಹತ್ತಿರದ ನಗರಗಳಿಂದ ಆಂಬ್ಯುಲೆನ್ಸ್‌ಗಳನ್ನು ಕರೆಸಲಾಗಿದೆ, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

