ಢಾಕಾದಲ್ಲಿ ಸ್ಫೋಟ
ವಿದೇಶ
ಢಾಕಾದಲ್ಲಿ 7 ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ: 15 ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 7 ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದ್ದು, 100 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು 15 ಮಂದಿ ಸಾವನ್ನಪ್ಪಿದ್ದಾರೆ.
ಢಾಕ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 7 ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದ್ದು, 100 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು 15 ಮಂದಿ ಸಾವನ್ನಪ್ಪಿದ್ದಾರೆ.
ಕಚೇರಿ ಒಳಭಾಗದಲ್ಲಿ ಈ ಸ್ಫೋಟ ಸಂಭವಿಸಿದ್ದು, ಸ್ಫೋಟಕ್ಕೆ ಕಾರಣ ಇನ್ನೂ ತಿಳಿದಿಲ್ಲ. ಆದರೆ ಸ್ಥಳೀಯರ ಪ್ರಕಾರ, ಕಟ್ಟಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ರಾಸಾಯನಿಕಗಳಿಂದಾಗಿ ಈ ಸ್ಫೋಟ ಸಂಭವಿಸಿರಬಹುದು ಎನ್ನಲಾಗುತ್ತಿದೆ. ಈ ಬಹುಮಹಡಿ ಕಟ್ಟಡವನ್ನು ಬಹುತೇಕ ಕಚೇರಿ ಹಾಗೂ ಉದ್ಯಮಗಳಿಗಾಗಿ ಬಳಕೆ ಮಾಡಲಾಗುತ್ತಿತ್ತು.
ಸ್ಫೋಟದ ತೀವ್ರತೆಗೆ ಗುಲಿಸ್ತಾನದಲ್ಲಿನ ಕಟ್ಟಡದ 5-6 ನೇ ಮಹಡಿಯೂ ಅಲುಗಾಡಿದೆ ಎಂದು ತಿಳಿದುಬಂದಿದೆ.
ಈ ಘಟನೆ ನಡೆದಿರುವ ಸ್ಥಳ ಢಾಕಾದ ಸಗಟು ಸರಕುಗಳ ಕೇಂದ್ರವಾಗಿದೆ. ಸ್ಫೋಟದಲ್ಲಿ ಕಟ್ಟಡದ ಗೋಡೆಗಳಿಗೆ ಹಾನಿಯುಂಟಾಗಿದ್ದು, ಗಾಜುಗಳು ಪುಡಿಯಾಗಿರುವುದಷ್ಟೇ ಅಲ್ಲದೇ ರಸ್ತೆಯ ಮತ್ತೊಂದು ಬದಿಯಲ್ಲಿದ್ದ ಬಸ್ ಗೂ ಹಾನಿಯುಂಟಾಗಿದೆ ಎಂದು ವರದಿಗಳ ಮೂಲಕ ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ