ಇಸ್ಲಾಮಾಬಾದ್: ತೋಷಖಾನಾ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್‌ಗೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನ ಪಲ್ಟಿ ಹೊಡೆದ ಘಟನೆ ಶನಿವಾರ ನಡೆದಿದೆ.
ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಇಮ್ರಾನ್ ಖಾನ್ ಅವಲು ನನ್ನ ಎಲ್ಲಾ ಪ್ರಕರಣಗಳಲ್ಲಿ ನಾನು ಜಾಮೀನು ಪಡೆದಿದ್ದರೂ, ಪಿಡಿಎಂ ಸರ್ಕಾರವು ನನ್ನನ್ನು ಬಂಧಿಸಲು ಉದ್ದೇಶಿಸಿದೆ ಎಂಬುದು ಈಗ ಸ್ಪಷ್ಟವಾಗಿದೆ. ಅವರ ದುಷ್ಕೃತ್ಯದ ಉದ್ದೇಶಗಳನ್ನು ತಿಳಿದಿದ್ದರೂ, ನಾನು ಇಸ್ಲಾಮಾಬಾದ್ ಮತ್ತು ನ್ಯಾಯಾಲಯಕ್ಕೆ ಹೋಗುತ್ತಿದ್ದೇನೆ. ನಾನು ಕಾನೂನಿನ ನಿಯಮವನ್ನು ನಂಬುತ್ತೇನೆ. ಈ ವಂಚಕರ ಗುಂಪಿನ ಕೆಟ್ಟ ಉದ್ದೇಶ ಎಲ್ಲರಿಗೂ ಸ್ಪಷ್ಟವಾಗಿದೆ ಎಂದು ಹೇಳಿದ್ದರು.
ಲಾಹೋರ್‌ನ ಸಂಪೂರ್ಣ ಮುತ್ತಿಗೆಯು ನಾನು ಒಂದು ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳಲು ಅಲ್ಲ, ಆದರೆ, ನಮ್ಮ ಚುನಾವಣಾ ಪ್ರಚಾರವನ್ನು ಮುನ್ನಡೆಸಲು ಸಾಧ್ಯವಾಗದ ಕಾರಣ ನನ್ನನ್ನು ಜೈಲಿಗೆ ಕರೆದೊಯ್ಯುವ ಉದ್ದೇಶವನ್ನು ಹೊಂದಿತ್ತು ಎಂಬುದು ಈಗ ಸ್ಪಷ್ಟವಾಗಿದೆ ಎಂದು ತಿಳಿಸಿದ್ದರು.
ಇಮ್ರಾನ್ ಖಾನ್ ಅವರು ಲಾಹೋರ್‌ನ ಜಮಾನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ತಮ್ಮ ಪಕ್ಷದ ಕಾರ್ಯಕರ್ತರ ಬೆಂಗಾವಲು ಪಡೆಯೊಂದಿಗೆ ಹೊರಟಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ 70 ವರ್ಷ ವಯಸ್ಸಿನ ಇಮ್ರಾನ್ ಖಾನ್, ಚುನಾವಣೆ ಆಯೋಗ ಸಲ್ಲಿಸಿದ ದೂರಿನ ಸಂಬಂಧ ವಿಚಾರಣೆಗೆ ಹಾಜರಾಗಲು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಎದುರು ಹಾಜರಾಗಲು ಇಮ್ರಾನ್ ಖಾನ್ ನಿರ್ಧರಿಸಿದ್ದರು. ಆಸ್ತಿ ಘೋಷಣೆಗಳಲ್ಲಿ ಉಡುಗೊರೆಗಳ ವಿವರಗಳನ್ನು ಮರೆಮಾಚಿದ್ದಕ್ಕಾಗಿ ಪಾಕಿಸ್ತಾನದ ಚುನಾವಣಾ ಆಯೋಗ ದೂರು ದಾಖಲಿಸಿತ್ತು.
ತೋಷಖಾನಾ ಎಂಬ ರಾಜ್ಯದ ಡಿಪಾಸಿಟರಿಯಿಂದ ರಿಯಾಯಿತಿ ದರದಲ್ಲಿ ಪ್ರಧಾನ ಮಂತ್ರಿಯಾಗಿ ಸ್ವೀಕರಿಸಿದ ದುಬಾರಿ ಗ್ರಾಫ್ ಕೈಗಡಿಯಾರ ಸೇರಿದಂತೆ ಉಡುಗೊರೆಗಳನ್ನು ಖರೀದಿಸಲು ಖಾನ್ ಅಡ್ಡಗಾಲು ಹಾಕಿದ್ದಾರೆ ಮತ್ತು ಲಾಭಕ್ಕಾಗಿ ಮಾರಾಟ ಮಾಡಿದ್ದಾರೆ ಎಂಬುದು ಅವರ ಮೇಲಿರುವ ಪ್ರಮುಖ ಆರೋಪ.
Advertisement