ಮೆಲ್ಬೋರ್ನ್‌ನ ಸ್ವಾಮಿನಾರಾಯಣ ದೇವಸ್ಥಾನ ವಿರೂಪ; ದುಷ್ಕರ್ಮಿಗಳಿಂದ ಭಾರತ ವಿರೋಧಿ ಗೀಚುಬರಹ!

ಈ ತಿಂಗಳಾಂತ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡುವ ಮುನ್ನ ಆಸ್ಟ್ರೇಲಿಯಾದಲ್ಲಿ ಪ್ರಮುಖ ಹಿಂದೂ ದೇವಾಲಯವನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ನಡೆದಿದೆ. ಸಿಡ್ನಿಯಲ್ಲಿರುವ ಪ್ರಮುಖ ಹಿಂದೂ ದೇವಾಲಯದ ಗೋಡೆ ಮೇಲೆ ಭಾರತ ವಿರೋಧಿ ಗೀಚುಬರಹದ ಮೂಲಕ ವಿರೂಪಗೊಳಿಸಿದ್ದಾರೆ. 
ಸಿಡ್ನಿಯ ರೋಸ್‌ಹಿಲ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರ
ಸಿಡ್ನಿಯ ರೋಸ್‌ಹಿಲ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರ

ಮೆಲ್ಬೋರ್ನ್: ಈ ತಿಂಗಳಾಂತ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡುವ ಮುನ್ನ ಆಸ್ಟ್ರೇಲಿಯಾದಲ್ಲಿ ಪ್ರಮುಖ ಹಿಂದೂ ದೇವಾಲಯವನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ನಡೆದಿದೆ. ಸಿಡ್ನಿಯಲ್ಲಿರುವ ಪ್ರಮುಖ ಹಿಂದೂ ದೇವಾಲಯದ ಗೋಡೆ ಮೇಲೆ ಭಾರತ ವಿರೋಧಿ ಗೀಚುಬರಹದ ಮೂಲಕ ವಿರೂಪಗೊಳಿಸಿದ್ದಾರೆ. 

ಸಿಡ್ನಿಯ ರೋಸ್‌ಹಿಲ್‌ನಲ್ಲಿರುವ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರದಲ್ಲಿ ಈ ಘಟನೆ ನಡೆದಿದೆ. ದೇವಾಲಯದ ಅಧಿಕಾರಿಗಳು ಗೇಟ್ ಮೇಲೆ ನೇತಾಡುತ್ತಿರುವ ಖಲಿಸ್ತಾನಿ ಧ್ವಜವನ್ನು ಕಂಡು, ನ್ಯೂ ಸೌತ್ ವೇಲ್ಸ್ (NSW) ಪೊಲೀಸರಿಗೆ ವಿಷಯ ತಿಳಿಸಿದ್ದಾರೆ ಎಂದು ಆಸ್ಟ್ರೇಲಿಯಾ ಟುಡೇ ಪತ್ರಿಕೆ ವರದಿ ಮಾಡಿದೆ.

ಸಿಡ್ನಿಯ ರೋಸ್‌ಹಿಲ್‌ನಲ್ಲಿರುವ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರದ ಗೋಡೆಗಳ ಮೇಲೆ ಸಮಾಜ ವಿರೋಧಿ ಶಕ್ತಿಗಳಿಂದ ಭಾರತ-ವಿರೋಧಿ ಗೀಚುಬರಹ ಕಂಡು ನಮಗೆ ಬಹಳ ಬೇಸರವಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಘಟನೆಯ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ಮೆಲ್ಬೋರ್ನ್‌ನಲ್ಲಿ ಮೂರು ಹಿಂದೂ ದೇವಾಲಯಗಳು ಮತ್ತು ಬ್ರಿಸ್ಬೇನ್‌ನ ಎರಡು ಹಿಂದೂ ದೇವಾಲಯಗಳನ್ನು ಖಾಲಿಸ್ತಾನ್ ಬೆಂಬಲಿಗರು ಧ್ವಂಸಗೊಳಿಸಿದ್ದರು.

ಮೇ 24 ರಂದು ಕ್ವಾಡ್ ಶೃಂಗಸಭೆಗಾಗಿ ಪ್ರಧಾನಿ ಮೋದಿ ಸಿಡ್ನಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್‌ನಲ್ಲಿ, ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರೊಂದಿಗೆ ಹಿಂದೂ ದೇವಾಲಯಗಳ ಮೇಲೆ ಆಗಾಗ್ಗೆ ದಾಳಿಗಳ ವಿಷಯವನ್ನು ಪ್ರಸ್ತಾಪಿಸಿದ್ದರು. 

ಧಾರ್ಮಿಕ ಸ್ಥಳಗಳ ಮೇಲಿನ ದಾಳಿಯನ್ನು ಆಸ್ಟ್ರೇಲಿಯಾ ಸಹಿಸುವುದಿಲ್ಲ ಮತ್ತು ಅಂತಹ ಚಟುವಟಿಕೆಗಳಿಗೆ ಹೊಣೆಯಾದವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅಲ್ಬನೀಸ್ ಮೋದಿಗೆ ಭರವಸೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com