ಉನ್ನತ ಸೇನಾಧಿಕಾರಿ ನಿವಾಸದ ಮೇಲೆ ದಾಳಿ: ಇಮ್ರಾನ್ ಖಾನ್ ಸೇರಿ 1500ಕ್ಕೂ ಹೆಚ್ಚು ಪಿಟಿಐ ಕಾರ್ಯಕರ್ತರ ಮೇಲೆ ಕೇಸು ದಾಖಲು

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಆತನ ಪಾಕಿಸ್ತಾನ್ ಟೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ 1500ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ದ ಲಾಹೋರ್ ನಲ್ಲಿ ಉನ್ನತ ಸೇನಾಧಿಕಾರಿಯ ನಿವಾಸದ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿರುವ ಪ್ರಕರಣದಲ್ಲಿ ಕೇಸು ದಾಖಲಿಸಲಾಗಿದೆ.
ಇಮ್ರಾನ್ ಖಾನ್
ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಆತನ ಪಾಕಿಸ್ತಾನ್ ಟೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ 1500ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ದ ಲಾಹೋರ್ ನಲ್ಲಿ ಉನ್ನತ ಸೇನಾಧಿಕಾರಿಯ ನಿವಾಸದ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿರುವ ಪ್ರಕರಣದಲ್ಲಿ ಕೇಸು ದಾಖಲಿಸಲಾಗಿದೆ.

ಕಳೆದ ಮಂಗಳವಾರ ಇಮ್ರಾನ್ ಖಾನ್ ನನ್ನು ಪೊಲೀಸರು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಿದ್ದರು. ಇದನ್ನು ಖಂಡಿಸಿ ಪಕ್ಷದ ಕಾರ್ಯಕರ್ತರು ನಿನ್ನೆ ಸೇನೆಯ ಉನ್ನತ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. 

ಲಾಹೋರ್ ಕಾರ್ಪ್ಸ್ ಕಮಾಂಡರ್ ನಿವಾಸಕ್ಕೆ ನಿವಾಸಕ್ಕೆ ಬೆಂಕಿ ಹಚ್ಚಿದ್ದಲ್ಲದೆ ಮಿಲಿಟರಿ ವಾಹನ ಮತ್ತು ವಸಾಹತುಗಳ ಮೇಲೆ ದಾಳಿ ನಡೆಸಿದ್ದಾರೆ.

ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಮತ್ತು ಉಪಾಧ್ಯಕ್ಷ ಶಾ ಮಹಮ್ಮೂದ್ ಖುರೇಷಿ ಹಾಗೂ ಇತರರ ವಿರುದ್ಧ ಕೊಲೆ, ಭಯೋತ್ಪಾದನೆ ಮತ್ತು ಇತರ 20 ಹೀನಾಯ ಅಪರಾಧ ಎಸಗಿರುವ ಆರೋಪ ಮತ್ತು ನಿನ್ನೆ ಲಾಹೋರ್ ಕಂಟೋನ್ಮೆಂಟ್ ಕಾರ್ಪ್ಸ್ ಕಮಾಂಡರ್ ಹೌಸ್ 'ಜಿನ್ಹಾ ಹೌಸ್' ಮೇಲೆ ದಾಳಿ ಮಾಡಿರುವ ಆರೋಪ ಕೇಳಿಬಂದಿದೆ.

ಜಿನ್ಹಾ ಹೌಸ್ ನಿಂದ ಸುಮಾರು 150 ಮಿಲಿಯನ್ ಗಿಂತಲೂ ಹೆಚ್ಚು ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿರುವ ಆರೋಪ ಕೂಡ ಇದೆ. ನಿನ್ನೆ ದಾಖಲಾಗಿರುವ ಎಫ್ಐಆರ್ ಪ್ರಕಾರ ದಾಳಿಯಲ್ಲಿ ಇಬ್ಬರು ವ್ಯಕ್ತಿಗಳು ಬಲಿಯಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com