ಗಾಜಾದಲ್ಲಿ ವಿಶ್ವಸಂಸ್ಥೆ ನಡೆಸುತ್ತಿರುವ ಶಾಲೆ ಮೇಲೆ ಇಸ್ರೇಲ್ ದಾಳಿ; 15 ಮಂದಿ ಸಾವು

ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಯ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಹಮಾಸ್ ಆರೋಗ್ಯ ಸಚಿವಾಲಯವು ಶನಿವಾರ ತಿಳಿಸಿದೆ.
ದಾಳಿಯಲ್ಲಿ ಗಾಯಗೊಂಡಿರುವ ಮಗುವಿಗೆ ಚಿಕಿತ್ಸೆ
ದಾಳಿಯಲ್ಲಿ ಗಾಯಗೊಂಡಿರುವ ಮಗುವಿಗೆ ಚಿಕಿತ್ಸೆ

ಗಾಜಾ: ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಯ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಹಮಾಸ್ ಆರೋಗ್ಯ ಸಚಿವಾಲಯವು ಶನಿವಾರ ತಿಳಿಸಿದೆ.

ಈ ಶಾಲೆಯಲ್ಲಿ ಸ್ಥಳಾಂತರಗೊಂಡ ಸಾವಿರಾರು ಪ್ಯಾಲೆಸ್ತೀನಿಯನ್ನರು ಆಶ್ರಯ ಪಡೆದಿದ್ದಾರೆ.

"ಇಂದು ಬೆಳಗ್ಗೆ ಅಲ್-ಫಖುರಾ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ಹತ್ಯಾಕಾಂಡದಲ್ಲಿ 15 ಮಂದಿ ಮೃತಪಟ್ಟಿದ್ದಾರೆ ಮತ್ತು 70 ಮಂದಿ ಗಾಯಗೊಂಡಿದ್ದಾರೆ" ಎಂದು ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದಕ್ಕು ಮುನ್ನ ಈ ಶಾಲೆಯ ಮೇಲೆ ನಡೆದ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 54 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com