ಬ್ರಿಟನ್ ವಿದೇಶಾಂಗ ಸಚಿವ ಡೇವಿಡ್ ಕೆಮರೂನ್- ಜೈ ಶಂಕರ್ ಭೇಟಿ; ದ್ವಿಪಕ್ಷೀಯ ಕಾರ್ಯತಂತ್ರದ ಬಗ್ಗೆ ಚರ್ಚೆ

ವಿದೇಶಾಂಗ ಸಚಿವ ಎಸ್ ಜೈಶಂಕರ್ ಬ್ರಿಟನ್ ನ ನೂತನ ವಿದೇಶಾಂಗ ಸಚಿವ ಡೇವಿಡ್ ಕೆಮರೂನ್ ಅವರನ್ನು ಲಂಡನ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಬ್ರಿಟನ್ ವಿದೇಶಾಂಗ ಸಚಿವ ಡೇವಿಡ್ ಕೆಮರೂನ್- ಜೈ ಶಂಕರ್
ಬ್ರಿಟನ್ ವಿದೇಶಾಂಗ ಸಚಿವ ಡೇವಿಡ್ ಕೆಮರೂನ್- ಜೈ ಶಂಕರ್

ಲಂಡನ್: ವಿದೇಶಾಂಗ ಸಚಿವ ಎಸ್ ಜೈಶಂಕರ್ ಬ್ರಿಟನ್ ನ ನೂತನ ವಿದೇಶಾಂಗ ಸಚಿವ ಡೇವಿಡ್ ಕೆಮರೂನ್ ಅವರನ್ನು ಲಂಡನ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. 

ದ್ವಿಪಕ್ಷೀಯ ಕಾರ್ಯತಂತ್ರ ಪಾಲುದಾರಿಕೆ ಬಗ್ಗೆ ಉಭಯ ನಾಯಕರೂ ಚರ್ಚೆ ನಡೆಸಿದ್ದಾರೆ. ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಿಢೀರ್ ತಮ್ಮ ಸಂಪುಟ ಪುನಾರಚನೆ ಮಾಡಿದ್ದು, ಅಚ್ಚರಿಯ ರೀತಿಯಲ್ಲಿ ಬ್ರಿಟನ್ ಮಾಜಿ ಪ್ರಧಾನಿ ಡೇವಿಡ್ ಕೆಮರೂನ್ ಅವರು ನೂತನ ವಿದೇಶಾಂಗ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 

ಬ್ರಿಟನ್ ನಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸಚಿವ ಸಂಪುಟ ಪುನಾರಚನೆ ಮಾಡಿರುವುದು ಮಹತ್ವ ಪಡೆದುಕೊಂಡಿದೆ. 

2016 ರಲ್ಲಿ ಬ್ರೆಕ್ಸಿಟ್ ಜನಾಭಿಪ್ರಾಯದ ಹಿನ್ನೆಲೆಯಲ್ಲಿ ಪ್ರಧಾನಿ ಹುದ್ದೆಯಿಂದ ಕೆಳಗಿಳಿದಿದ್ದ ಡೇವಿಡ್ ಕೆಮರೂನ್ ಈಗ ವಿದೇಶಾಂಗ ಸಚಿವರಾಗಿ ಮುನ್ನೆಲೆಗೆ ಬಂದಿರುವುದಕ್ಕೆ ವಿದೇಶಾಂಗ ಸಚಿವ ಜೈ ಶಂಕರ್ ಅಭಿನಂದನೆ ಸಲ್ಲಿಸಿದ್ದಾರೆ. 

ಜಾಗತಿಕ ಸಂಘರ್ಷಗಳು ಹಾಗೂ ಇಂಡೋ-ಪೆಸಿಫಿಕ್ ಪ್ರದೇಶಗಳಲ್ಲಿನ ಬೆಳವಣಿಗೆ ಬಗ್ಗೆ ಕೆಮರೂನ್-ಜಯಶಂಕರ್ ಚರ್ಚೆ ಮಾಡಿದ್ದಾರೆ. 

"ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಕ್ಯಾಮರೂನ್ ಅವರನ್ನು ಅವರ ಕಚೇರಿಯ ಮೊದಲ ದಿನದಂದು ಭೇಟಿಯಾಗಲು ಸಂತೋಷವಾಗಿದೆ ಎಂದು ಜೈಶಂಕರ್ ಸಂವಾದದ ಚಿತ್ರಗಳೊಂದಿಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಪಶ್ಚಿಮ ಏಷ್ಯಾದ ಪರಿಸ್ಥಿತಿ, ಉಕ್ರೇನ್ ಸಂಘರ್ಷ ಮತ್ತು ಇಂಡೋ-ಪೆಸಿಫಿಕ್ ಬಗ್ಗೆ ಕ್ಯಾಮೆರಾನ್ ಅವರೊಂದಿಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾಗಿ  ಜಯಶಂಕರ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com