ಪೂರ್ವ ಉಕ್ರೇನ್‌ ಮೇಲೆ ರಷ್ಯಾ  ಕ್ಷಿಪಣಿ ದಾಳಿ; ಕನಿಷ್ಠ 49 ಮಂದಿ ಸಾವು

ರಷ್ಯಾ ಮತ್ತೆ ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಖಾರ್ಕಿವ್‌ನ ಪೂರ್ವ ಪ್ರದೇಶದಲ್ಲಿ ಕಿರಾಣಿ ಅಂಗಡಿ ಮತ್ತು ಕೆಫೆಯ ಮೇಲೆ ಮಾಸ್ಕೋ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 49 ಮಂದಿ ಮೃತಪಟ್ಟಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು...
ರಷ್ಯಾದಿಂದ ಕ್ಷಿಪಣಿ ದಾಳಿ
ರಷ್ಯಾದಿಂದ ಕ್ಷಿಪಣಿ ದಾಳಿ

ಕೀವ್: ರಷ್ಯಾ ಮತ್ತೆ ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಖಾರ್ಕಿವ್‌ನ ಪೂರ್ವ ಪ್ರದೇಶದಲ್ಲಿ ಕಿರಾಣಿ ಅಂಗಡಿ ಮತ್ತು ಕೆಫೆಯ ಮೇಲೆ ಮಾಸ್ಕೋ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 49 ಮಂದಿ ಮೃತಪಟ್ಟಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ರಷ್ಯಾದ ಗಡಿಯಲ್ಲಿರುವ ಯುದ್ಧ-ಪೀಡಿತ ಪ್ರದೇಶದ ಕುಪಿಯಾನ್ಸ್ಕ್ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಹೇಳಿದ್ದಾರೆ.

"ಒಂದು ಸಾಮಾನ್ಯ ಕಿರಾಣಿ ಅಂಗಡಿ ಮೇಲೆ ರಾಕೆಟ್‌ ದಾಳಿ ಮಾಡಿದ ರಷ್ಯಾದ ಈ ಕ್ರೂರ ಕೃತ್ಯ ಸಂಪೂರ್ಣವಾಗಿ ಉದ್ದೇಶಪೂರ್ವಕ ಭಯೋತ್ಪಾದಕ ದಾಳಿಯಾಗಿದೆ" ಎಂದು ಝೆಲೆನ್ಸ್ಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ರಷ್ಯಾ ದಾಳಿಯಲ್ಲಿ ಕನಿಷ್ಠ 49 ಜನ ಸಾವನ್ನಪ್ಪಿದ್ದಾರೆ ಎಂದು ಉಕ್ರೇನಿಯನ್ ಪ್ರಾಸಿಕ್ಯೂಟರ್ ಜನರಲ್ ಹೇಳಿದ್ದಾರೆ.

ಇಂದು ಮಧ್ಯಾಹ್ನ 1:15 (1015 GMT)ರ ಸುಮಾರಿಗೆ ಗ್ರೋಜಾ ಗ್ರಾಮದಲ್ಲಿರುವ ಕೆಫೆ ಮತ್ತು ಅಂಗಡಿ ಮೇಲೆ ದಾಳಿ ನಡೆಸಲಾಗಿದೆ ಎಂದು ಖಾರ್ಕಿವ್ ಪ್ರದೇಶದ ಮುಖ್ಯಸ್ಥ ಒಲೆಗ್ ಸಿನೆಗುಬೊವ್ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com