ಕೆನಡಾದಲ್ಲಿ ಮತ್ತೊಂದು ಗ್ಯಾಂಗ್‌ವಾರ್‌; ಖಲಿಸ್ತಾನಿ ಉಗ್ರ ಸುಖ್ ದೂಲ್ ಸಿಂಗ್ ಹತ್ಯೆ

ಕೆನಡಾದಲ್ಲಿ ನಡೆದ ಗ್ಯಾಂಗ್‌ವಾರ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಸುಖ್ ದೂಲ್ ಸಿಂಗ್ ಅಲಿಯಾಸ್ ಸುಖ ಡುನೆಕೆ ಹತ್ಯೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ಖಲಿಸ್ತಾನಿ ಉಗ್ರ ಸುಖ್ ದೂಲ್ ಸಿಂಗ್ ಹತ್ಯೆ
ಖಲಿಸ್ತಾನಿ ಉಗ್ರ ಸುಖ್ ದೂಲ್ ಸಿಂಗ್ ಹತ್ಯೆ

ಒಟ್ಟಾವಾ: ಕೆನಡಾದಲ್ಲಿ ನಡೆದ ಗ್ಯಾಂಗ್‌ವಾರ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಸುಖ್ ದೂಲ್ ಸಿಂಗ್ ಅಲಿಯಾಸ್ ಸುಖ ಡುನೆಕೆ ಹತ್ಯೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಸುಖ್ ದೂಲ್ ಸಿಂಗ್ ಕೆನಡಾದಲ್ಲಿ ಖಲಿಸ್ತಾನ್ ಚಳವಳಿಯ ಭಾಗವಾಗಿದ್ದ ಎನ್ನಲಾಗಿದೆ. ಸುಖ್ ದೂಲ್ ಸಿಂಗ್ ಕೆನಡಾ ಮೂಲದ ದರೋಡೆಕೋರ ಅರ್ಶ್‌ದೀಪ್ ಸಿಂಗ್ ಅಲಿಯಾಸ್ ಅರ್ಶ್ ದಲಾನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಿಜ್ಜರ್ ಭಾರತೀಯ ಭಯೋತ್ಪಾದಕ ಮತ್ತು ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನಾಗಿದ್ದ. ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಸರ್ರೆಯ ಗುರುದ್ವಾರದ ಹೊರಗೆ ಹತ್ಯೆಗೀಡಾಗಿದ್ದ. ಈತ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ. 2017 ರಲ್ಲಿ ನಕಲಿ ಪಾಸ್‌ಪೋರ್ಟ್‌ನಲ್ಲಿ ಪಂಜಾಬ್‌ನ ಮೊಗಾದಿಂದ ಕೆನಡಾಕ್ಕೆ ಪಲಾಯನ ಮಾಡಿದ್ದ ಡುನೆಕೆ  ಭಾರತದಲ್ಲಿ "ಎ" ವರ್ಗದ ಉಗ್ರಗಾಮಿಯಾಗಿದ್ದ ಮತ್ತು ಭಾರತೀಯ ಭದ್ರತಾ ಅಧಿಕಾರಿಗಳಿಗೆ ಮೋಸ್ಟ್ ವಾಂಟೆಡ್ ಆಗಿದ್ದ ಎಂದು ತಿಳಿದುಬಂದಿದೆ.

ಭಯೋತ್ಪಾದನಾ ನಿಗ್ರಹ ಸಂಸ್ಥೆ ಎನ್‌ಐಎ ನಿನ್ನೆ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಖಲಿಸ್ತಾನ್ ಮತ್ತು ಕೆನಡಾದೊಂದಿಗೆ ಸಂಪರ್ಕ ಹೊಂದಿರುವ 43 ದರೋಡೆಕೋರರಲ್ಲಿ ಈತ ಕೂಡ  ಒಬ್ಬನಾಗಿದ್ದ.

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆಗೂ ಭಾರತೀಯ ಸರ್ಕಾರಿ ಏಜೆಂಟರಿಗೂ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಈ ವಾರದ ಆರಂಭದಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಹೇಳಿದ್ದರು. ಈ ಹೇಳಿಕೆ ಭಾರತ-ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಸುಖ್ ದೂಲ್ ಸಿಂಗ್ ಹತ್ಯೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com