ದಕ್ಷಿಣ ಆಫ್ರಿಕಾ ಪ್ರವಾಸ ಮುಗಿಸಿ ಗ್ರೀಸ್ ರಾಜಧಾನಿ ಅಥೆನ್ಸ್ ಗೆ ಬಂದಿಳಿದ ಪ್ರಧಾನಿ ಮೋದಿ: 40 ವರ್ಷಗಳ ಬಳಿಕ ಗ್ರೀಸ್‌ಗೆ ಭಾರತದ ಪ್ರಧಾನಿ ಭೇಟಿ

ದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್ ಶೃಂಗಸಭೆಯನ್ನು ಮುಕ್ತಾಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ತಮ್ಮ ಗ್ರೀಕ್ ರಾಜಧಾನಿ ಅಥೆನ್ಸ್ ಗೆ ಆಗಮಿಸಿದರು, ಅಲ್ಲಿ ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೋಟಾಕಿಸ್ ಹಾಗೂ ಸರ್ಕಾರದ ಪ್ರತಿನಿಧಿಗಳು ಗೌರವಪೂರ್ವ ಸ್ವಾಗತ ನೀಡಿದರು.
ಗ್ರೀಸ್ ಗೆ ಬಂದಿಳಿದ ಪ್ರಧಾನಿ ಮೋದಿ
ಗ್ರೀಸ್ ಗೆ ಬಂದಿಳಿದ ಪ್ರಧಾನಿ ಮೋದಿ

ಅಥೆನ್ಸ್: ದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್ ಶೃಂಗಸಭೆಯನ್ನು ಮುಕ್ತಾಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ತಮ್ಮ ಗ್ರೀಕ್ ರಾಜಧಾನಿ ಅಥೆನ್ಸ್ ಗೆ ಆಗಮಿಸಿದರು, ಅಲ್ಲಿ ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೋಟಾಕಿಸ್ ಹಾಗೂ ಸರ್ಕಾರದ ಪ್ರತಿನಿಧಿಗಳು ಗೌರವಪೂರ್ವ ಸ್ವಾಗತ ನೀಡಿದರು.

ಕಳೆದ 40 ವರ್ಷಗಳಲ್ಲಿ ಗ್ರೀಸ್ ದೇಶಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ ಆಗಿದ್ದಾರೆ. ವಿದೇಶಾಂಗ ಸಚಿವಾಲಯದ ಪ್ರಕಟಣೆ ಪ್ರಕಾರ, ದಕ್ಷಿಣ ಆಫ್ರಿಕಾಕ್ಕೆ ಅವರ ಭೇಟಿಯ ನಂತರ, ಪ್ರಧಾನ ಮಂತ್ರಿ ಗ್ರೀಸ್‌ನ ಪ್ರಧಾನ ಮಂತ್ರಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರ ಆಹ್ವಾನದ ಮೇರೆಗೆ ಇಂದು ಗ್ರೀಸ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಕಳೆದ 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರ ಮೊದಲ ಭೇಟಿಯಾಗಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com