ಚೀನಾದಲ್ಲಿ ವಾಹನಗಳ ಸರಣಿ ಅಪಘಾತ, 16 ಮಂದಿ ಸಾವು, 66 ಮಂದಿಗೆ ಗಾಯ
ಮಧ್ಯ ಚೀನಾದ ಹುನಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಮತ್ತು 66 ಜನ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಯೊಂದು ಭಾನುವಾರ ತಿಳಿಸಿದೆ.
Published: 05th February 2023 07:49 PM | Last Updated: 05th February 2023 07:49 PM | A+A A-

ಸಾಂದರ್ಭಿಕ ಚಿತ್ರ
ಬೀಜಿಂಗ್: ಮಧ್ಯ ಚೀನಾದ ಹುನಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಮತ್ತು 66 ಜನ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಯೊಂದು ಭಾನುವಾರ ತಿಳಿಸಿದೆ.
ಶನಿವಾರ ಸಂಜೆ ಹುನಾನ್ ಪ್ರಾಂತ್ಯದ ಚಾಂಗ್‌ಶಾ ನಗರದ ಕ್ಸುಚಾಂಗ್-ಗುವಾಂಗ್‌ಝೌ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಒಟ್ಟು 49 ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಈ ಸರಣಿ ಅಪಘಾತ ಸಂಭವಿಸಿದೆ ಎಂದು ಸರ್ಕಾರಿ ಸಿಜಿಟಿಎನ್ ಸುದ್ದಿ ಪೋರ್ಟಲ್ ವರದಿ ಮಾಡಿದೆ.
ಇದನ್ನು ಓದಿ: Chinese apps ban: ಚೀನಾದ 138 ಬೆಟ್ಟಿಂಗ್, 94 ಲೋನ್ ಆ್ಯಪ್‌ಗಳ ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ
"ಅಪಘಾತದಲ್ಲಿ 16 ಜನ ಸಾವನ್ನಪ್ಪಿದ್ದಾರೆ ಮತ್ತು 66 ಜನರು ಗಾಯಗೊಂಡಿದ್ದಾರೆ" ಎಂದು ಸ್ಥಳೀಯ ಸಂಚಾರ ಪೊಲೀಸ್ ಇಲಾಖೆ ನೀಡಿದ ಮಾಹಿತಿ ಉಲ್ಲೇಖಿಸಿ ವರದಿ ಮಾಡಿದೆ.
ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, ಅವರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.