ಸಿರಿಯಾ, ಟರ್ಕಿಯಲ್ಲಿ ಪ್ರಬಲ ಭೂಕಂಪನ: 360 ಮಂದಿ ದುರ್ಮರಣ; ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಪ್ರಭಲ ಭೂಕಂಪದಿಂದ ಸಾವು, ನೋವುಗಳು ಮತ್ತಷ್ಟು ಹೆಚ್ಚಾಗಿದೆ. ಇದುವೆರೆಗೆ ಸಿಕ್ಕ ಮಾಹಿತಿ ಪ್ರಕಾರ, ಒಟ್ಟು 360 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಟರ್ಕಿಯಲ್ಲಿ ಪ್ರಬಲ ಭೂಕಂಪನ
ಟರ್ಕಿಯಲ್ಲಿ ಪ್ರಬಲ ಭೂಕಂಪನ

ಅಂಕಾರಾ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಪ್ರಭಲ ಭೂಕಂಪದಿಂದ ಸಾವು, ನೋವುಗಳು ಮತ್ತಷ್ಟು ಹೆಚ್ಚಾಗಿದೆ. ಇದುವೆರೆಗೆ ಸಿಕ್ಕ ಮಾಹಿತಿ ಪ್ರಕಾರ, ಒಟ್ಟು 360 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇಂದು ಮುಂಜಾನೆ ದಕ್ಷಿಣ ಟರ್ಕಿಯಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.8 ದಾಖಲಾಗಿದೆ.

ಇನ್ನು, ಟರ್ಕಿಯ ಸ್ಥಳೀಯ ಮಾಧ್ಯಮಗಳು ಮಾಡಿರುವ ವರದಿ ಪ್ರಕಾರ, ಇದುವೆರೆಗೆ 100 ಮೃತದೇಹಗಳನ್ನು ಅವಶೇಷಗಳಡಿಯಿಂದ ತೆಗೆಯಲಾಗಿದೆ. ಸುಮಾರು 440ಕ್ಕೂ ಹೆಚ್ಚು ಜನರು ಕಣ್ಮರೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ. ಸುಮಾರು 130ಕ್ಕೂ ಹೆಚ್ಚು ಮನೆಗಳು ಮಲಟ್ಯಾ ಪ್ರಾಂತ್ಯವೊಂದರಲ್ಲೇ ನೆಲಸಮವಾಗಿವೆ.

ಬಂಡುಕೋರರ ಹಿಡಿತದಲ್ಲಿರುವ ವಾಯುವ್ಯ ಸಿರಿಯಾದಲ್ಲಿ ಪರಿಸ್ಥಿತಿ ವಿನಾಶಕಾರಿಯಾಗಿದೆ ಎಂದು ವರದಿಗಳಾಗಿವೆ. ಹಲವಾರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಕಟ್ಟಡಗಳನ್ನು ತೊರೆದು, ತೆರೆದ ಖಾಲಿ ಪ್ರದೇಶದಲ್ಲಿ ಸೇರುವಂತೆ ನಾಗರಿಕರಿಗೆ ರಕ್ಷಣಾ ತಂಡಗಳು ಸೂಚಿವೆ.

ಟರ್ಕಿಯು ಆಗಾಗ್ಗೆ ಭೂಕಂಪಗಳಿಂದ ನಡುಗುತ್ತದೆ. ಲೆಬನಾನ್ ಮತ್ತು ಸಿರಿಯಾದಲ್ಲೂ ಭೂಕಂಪದ ಅನುಭವವಾಗಿದೆ. ಉತ್ತರದ ನಗರವಾದ ಅಲೆಪ್ಪೊ ಮತ್ತು ಕೇಂದ್ರ ನಗರವಾದ ಹಮಾದಲ್ಲಿ ಕೆಲವು ಕಟ್ಟಡಗಳು ಕುಸಿದಿವೆ ಎಂದು ಸಿರಿಯಾದ ರಾಜ್ಯ ಮಾಧ್ಯಮ ವರದಿ ಮಾಡಿದೆ.

ಟರ್ಕಿಯ ಗಡಿಯಲ್ಲಿರುವ ಸಿರಿಯಾದ ಬಂಡುಕೋರರ ಹಿಡಿತದಲ್ಲಿರುವ ವಾಯುವ್ಯದಲ್ಲಿ, ವಿರೋಧ ಪಕ್ಷದ ಸಿರಿಯನ್ ನಾಗರಿಕ ರಕ್ಷಣಾ ಪ್ರಕಾರ ಹಲವಾರು ಕಟ್ಟಡಗಳು ಕುಸಿದವು. ಗಾಯಾಳುಗಳ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಬಂದಿಲ್ಲ. ಬೈರುತ್ ಮತ್ತು ಡಮಾಸ್ಕಸ್‌ನಲ್ಲಿ ಕಟ್ಟಡಗಳು ನಡುಗಿದವು ಮತ್ತು ಅನೇಕ ಜನರು ಭಯದಿಂದ ಬೀದಿಗೆ ಓಡಿ ಬಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಗಲಿದ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಭಾರತವು ಟರ್ಕಿಯ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಮತ್ತು ಈ ದುರಂತವನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡಲು ಸಿದ್ಧವಾಗಿದೆ ಎಂದು ಮೋದಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com