ಪ್ರಬಲ ಸರಣಿ ಭೂಕಂಪಕ್ಕೆ ನಲುಗಿದ ಟರ್ಕಿ, ಸಿರಿಯಾ; ಸಾವಿನ ಸಂಖ್ಯೆ 2300ಕ್ಕೆ ಏರಿಕೆ

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಅತ್ಯಂತ ಪ್ರಬಲ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 2,300ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.
ಪ್ರಬಲ ಸರಣಿ ಭೂಕಂಪಕ್ಕೆ ನಲುಗಿದ ಟರ್ಕಿ
ಪ್ರಬಲ ಸರಣಿ ಭೂಕಂಪಕ್ಕೆ ನಲುಗಿದ ಟರ್ಕಿ

ಅಂಕಾರಾ(ಟರ್ಕಿ)/ಅಜ್ಮರಿನ್ (ಸಿರಿಯಾ): ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಅತ್ಯಂತ ಪ್ರಬಲ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 2,300ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.

ಯುದ್ಧದಿಂದ ಧ್ವಂಸಗೊಂಡ ಸಿರಿಯಾದ ಉತ್ತರ ಗಡಿಯಲ್ಲಿ ಮತ್ತು ದಕ್ಷಿಣ ಟರ್ಕಿಯಲ್ಲಿ ಇಂದು ಮೂರನೇ ಬಾರಿ ಭೂಮಿ ಕಂಪಿಸಿದ್ದು, ಪ್ರಬಲ ಸರಣಿ ಭೂಕಂಪದಿಂದ 6,500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಕಳೆದ 24 ಗಂಟೆಯಲ್ಲಿ ಮೂರು ಬಾರಿ ಭೂಮಿ ಕಂಪಿಸಿದ್ದು, ಸಾವಿರಾರು ಕಟ್ಟಡಗಳು ಧರೆಗುರುಳಿವೆ ಮತ್ತು ನೂರಾರು ಜನ ಜೀವಂತ ಸಮಾಧಿಯಾಗಿದ್ದಾರೆ. ಎರಡೂ ದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಮೊದಲ ಬಾರಿಗೆ ಇಂದು ಬೆಳಗ್ಗೆ4 ಗಂಟೆಗೆ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಎರಡನೇ ಬಾರಿ 7.5 ತೀವ್ರತೆಯ ಭೂಕಂಪ ಸಂಭವಿಸಿದೆ. ಕೆಲವು ಗಂಟೆಗಳ ನಂತರ ಮಧ್ಯ ಟರ್ಕಿಯಲ್ಲಿ 6.0 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

ಭೂಕಂಪನದಿಂದ ನೂರಾರು ಬಹುಮಹಡಿ ಕಟ್ಟಡಗಳು ನೆಲಕ್ಕುರುಳಿವೆ. ಪರಿಣಾಮ ಸಾವಿರಾರು ಜನ ಅದರ ಅವಶೇಷದಡಿ ಸಿಲುಕಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚು ಸಾಧ್ಯತೆ ಇದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com