ಟರ್ಕಿ, ಸಿರಿಯಾದಲ್ಲಿ ಸರಣಿ ಭೂಕಂಪ: ಸಾವಿನ ಸಂಖ್ಯೆ 6200ಕ್ಕೆ ಏರಿಕೆ, ತುರ್ತು ಪರಿಸ್ಥಿತಿ ಘೋಷಣೆ

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಅತ್ಯಂತ ಪ್ರಬಲ ಸರಣಿ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 6,300ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.
ಪ್ರಬಲ ಸರಣಿ ಭೂಕಂಪಕ್ಕೆ ನಲುಗಿದ ಟರ್ಕಿ
ಪ್ರಬಲ ಸರಣಿ ಭೂಕಂಪಕ್ಕೆ ನಲುಗಿದ ಟರ್ಕಿ
Updated on

ಅಂಕಾರಾ(ಟರ್ಕಿ)/ಅಜ್ಮರಿನ್ (ಸಿರಿಯಾ): ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಅತ್ಯಂತ ಪ್ರಬಲ ಸರಣಿ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 6,300ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.

ಯುದ್ಧದಿಂದ ಧ್ವಂಸಗೊಂಡ ಸಿರಿಯಾದ ಉತ್ತರ ಗಡಿಯಲ್ಲಿ ಮತ್ತು ದಕ್ಷಿಣ ಟರ್ಕಿಯಲ್ಲಿ ಇಂದು ಐದನೇ ಬಾರಿ ಭೂಮಿ ಕಂಪಿಸಿದ್ದು, ಪ್ರಬಲ ಸರಣಿ ಭೂಕಂಪದಿಂದ ಕನಿಷ್ಠ 20,426ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಶತಮಾನದ ಭೀಕರ ಭೂಕಂಪದಲ್ಲಿ ಸುಮಾರು 20,000 ಜನ ಸಾವನ್ನಪ್ಪಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಧಿಕಾರಿಗಳು ಹೇಳಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದೆಂಬ ಆತಂಕವಿದೆ.

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪಗಳಲ್ಲಿ 6,200 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಈ ಪೈಕಿ, ಟರ್ಕಿಯೊಂದರಲ್ಲೇ 4,544 ಜನ ಪ್ರಾಣ ಕಳೆದುಕೊಂಡಿದ್ದಾರೆ.

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಮೂರು ತಿಂಗಳ ಅವಧಿಗೆ ಟರ್ಕಿಯ 10 ಪ್ರಾಂತ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ದಕ್ಷಿಣ ಟರ್ಕಿಯಲ್ಲಿನ ವಿನಾಶಕಾರಿ ಭೂಕಂಪಗಳಿಂದ ನಲುಗಿರುವ 10 ಪ್ರಾಂತ್ಯಗಳನ್ನು ವಿಪತ್ತು ವಲಯವೆಂದು ಘೋಷಿಸಿದ ಎರ್ಡೊಗನ್ ಅವರು, ಮೂರು ತಿಂಗಳ ತುರ್ತು ಪರಿಸ್ಥಿತಿ  ಮತ್ತು 7 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದಾರೆ.

ಟರ್ಕಿಯ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಭೂಕಂಪದಿಂದಾಗಿ ಕನಿಷ್ಠ 20,426 ಜನ ಗಾಯಗೊಂಡಿದ್ದಾರೆ ಮತ್ತು 5,775 ಕಟ್ಟಡಗಳು ಧರೆಗುರುಳಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾವಿರಾರು ಜನರನ್ನು ರಕ್ಷಿಸಲು ಶೀತ ತಾಪಮಾನ ಮತ್ತು ರಸ್ತೆಗಳು ಹಾನಿಯಾಗಿರುವುದು ಸೇರಿದಂತೆ ಇತರ ಹಲವು ಸವಾಲುಗಳು ಕಾರ್ಯಾಚರಣೆಗೆ ಅಡ್ಡಿಯಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com