ಮಿಚಿಗನ್ ಸ್ಟೇಟ್ ವಿವಿಯಲ್ಲಿ ಗುಂಡಿನ ದಾಳಿಗೆ ಮೂವರು ಬಲಿ, 5 ಮಂದಿಗೆ ಗಾಯ

ಮಿಚಿಗನ್ ಸ್ಟೇಟ್ ವಿವಿಯಲ್ಲಿ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದು 5 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಶಂಕಿತರಿಗಾಗಿ ಶೋಧ ಕಾರ್ಯ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. 
ಮಿಚಿಗನ್ ಸ್ಟೇಟ್ ವಿವಿ
ಮಿಚಿಗನ್ ಸ್ಟೇಟ್ ವಿವಿ

ಪೂರ್ವ ಲ್ಯಾನ್ಸಿಂಗ್: ಮಿಚಿಗನ್ ಸ್ಟೇಟ್ ವಿವಿಯಲ್ಲಿ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದು 5 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಶಂಕಿತರಿಗಾಗಿ ಶೋಧ ಕಾರ್ಯ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. 

ಗುಂಡಿನ ದಾಳಿ ಹಿನ್ನೆಲೆಯಲ್ಲಿ ಈಸ್ಟ್ ಲ್ಯಾನ್ಸಿಂಗ್ ಕ್ಯಾಂಪಸ್ ನಲ್ಲಿ ನೂರಾರು ಮಂದಿ ಅಧಿಕಾರಿಗಳು ಭದ್ರತೆಯನ್ನು ಒದಗಿಸಿದ್ದು, ಶಂಕಿತ ವ್ಯಕ್ತಿಗಾಗಿ ಶೋಧಕಾರ್ಯ ಕೈಗೊಳ್ಳಲಾಗಿದೆ. 

ಪೊಲೀಸ್ ಮೂಲಗಳ ಪ್ರಕಾರ, ಕೆಂಪು ಬಣ್ಣದ ಶೂ, ಜೀನ್ ಹಾಗೂ ಬಾಲ್ ಕ್ಯಾಪ್ ಧರಿಸಿದ್ದ ಕಪ್ಪು ವ್ಯಕ್ತಿ ಈ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
 
ಮೂವರು ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 8:30 ಕ್ಕೆ ಗುಂಡಿನ ದಾಳಿ ನಡೆದಿದೆ ಎಂದು ಕ್ಯಾಂಪಸ್ ಪೊಲೀಸ್ ಇಲಾಖೆಯ ಉಪ ಮುಖ್ಯಸ್ಥರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com