ಕರಾಚಿ ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ; ಐವರು ಉಗ್ರರು, ಓರ್ವ ಅಧಿಕಾರಿ, ಸಾರ್ವಜನಿಕ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಕಿಸ್ತಾನದ ಕರಾಚಿಯಲ್ಲಿ ಪೊಲೀಸ್ ಪ್ರಧಾನ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಭದ್ರತಾ ಸಿಬ್ಬಂದಿಗಳು ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಕರಾಚಿ ಪೊಲೀಸ್ ಪ್ರಧಾನ ಕಚೇರಿ ಮೇಲೆ ಉಗ್ರ ದಾಳಿ
ಕರಾಚಿ ಪೊಲೀಸ್ ಪ್ರಧಾನ ಕಚೇರಿ ಮೇಲೆ ಉಗ್ರ ದಾಳಿ

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಪೊಲೀಸ್ ಪ್ರಧಾನ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಭದ್ರತಾ ಸಿಬ್ಬಂದಿಗಳು ಪ್ರತಿದಾಳಿ ನಡೆಸಿ 5 ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಪಾಕಿಸ್ತಾನದ ಅತ್ಯಂತ ಜನನಿಬಿಡ ನಗರವಾದ ಕರಾಚಿಯಲ್ಲಿರುವ ಪೊಲೀಸ್ ಮುಖ್ಯಸ್ಥರ ಕಚೇರಿ ಮೇಲೆ ಅಪರಿಚಿತ ಶಸ್ತ್ರಸಜ್ಜಿತ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ವಿಚಾರ ತಿಳಿದ ಕೂಡಲೇ ಅರೆಸೇನಾ ಪಡೆಗಳು ಸ್ಥಳಕ್ಕೆ ದೌಡಾಯಿಸಿ ಪ್ರತಿದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ದಾಳಿಕೋರರ ನಡುವೆ ತೀವ್ರ ಗುಂಡಿನ ಚಕಮಕಿ ಪ್ರಾರಂಭವಾಗಿದ್ದು, ಈ ವೇಳೆ 5 ದಾಳಿಕೋರರನ್ನು ಹೊಡೆದುರುಳಿಸಲಾಗಿದೆ.

ಮೂಲಗಳ ಪ್ರಕಾರ, ದಾಳಿಯಲ್ಲಿ ಭಾಗಿಯಾಗಿರುವ ಉಗ್ರರ ಸಂಖ್ಯೆ ದೃಢಪಟ್ಟಿಲ್ಲ. ಗುಂಡಿನ ಚಕಮಕಿ ನಡೆಯುತ್ತಿದ್ದು, ಘಟನೆಯಲ್ಲಿ ಓರ್ವ ಭದ್ರತಾ ಅಧಿಕಾರಿ ಮತ್ತು ಓರ್ವ ನಾಗರಿಕ ಸಾವನ್ನಪ್ಪಿದ್ದು, 10 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ.

ಇನ್ನು ಕರಾಚಿ ಪೊಲೀಸ್ ಮುಖ್ಯಸ್ಥರ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆದಿದೆ ಎಂದು ಕರಾಚಿ ಪೊಲೀಸ್ ವಕ್ತಾರರು ಹೇಳಿಕೆಯಲ್ಲಿ ದೃಢಪಡಿಸಿದ್ದು, ಗುಂಡಿನ ದಾಳಿ ನಡೆಯುತ್ತಿದೆ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಕರಾಚಿ ಪೊಲೀಸ್ ಮುಖ್ಯಸ್ಥ ಜಾವೇದ್ ಓಧೋ ಅವರು ತಮ್ಮ ಕಚೇರಿಯ ಮೇಲೆ ದಾಳಿ ನಡೆಸಿರುವುದನ್ನು ಟ್ವೀಟ್‌ನಲ್ಲಿ ಖಚಿತಪಡಿಸಿದ್ದಾರೆ. ಭದ್ರತಾ ಪಡೆಗಳು ದಿಟ್ಟ ಉತ್ತರ ನೀಡಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಧರ್ಮ ನಿಂದನೆ ಆರೋಪ: ಪಾಕ್‌ನಲ್ಲಿ ಠಾಣೆಗೆ ನುಗ್ಗಿ ವ್ಯಕ್ತಿಯನ್ನು ಎಳೆತಂದು ಥಳಿಸಿ, ಸುಟ್ಟು ಹಾಕಿದ ಮೂಲಭೂತವಾದಿಗಳು!
 
ಕರಾಚಿ ಪೊಲೀಸ್ ಮುಖ್ಯಸ್ಥರ ಕಚೇರಿಯು ವಿಮಾನ ನಿಲ್ದಾಣಕ್ಕೆ ಹೋಗುವ ನಗರದ ಮುಖ್ಯ ರಸ್ತೆಯ ಸಮೀಪದಲ್ಲಿದೆ. ದಾಳಿಯ ಹೊಣೆಯನ್ನು ಯಾವುದೇ ಗುಂಪು ಇನ್ನೂ ಹೊತ್ತುಕೊಂಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com