ಪಾಕಿಸ್ತಾನದಲ್ಲಿ 8 ತಿಂಗಳ ಕಾಲ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
ಪಾಕಿಸ್ತಾನದ ಮುಜಾಫರ್‌ಗಢ ಜಿಲ್ಲೆಯಲ್ಲಿ 13 ವರ್ಷದ ಬಾಲಕಿ ಮೇಲೆ ಎಂಟು ತಿಂಗಳ ಕಾಲ ಮೂವರು ಅತ್ಯಾಚಾರ ಎಸಗಿದ್ದಾರೆ. ಆಕೆಯ ಬೆತ್ತಲೆ ಫೊಟೋಗಳು ಮತ್ತು ವಿಡಿಯೋಗಳನ್ನು ಬ್ಲ್ಯಾಕ್‌ಮೇಲ್‌ಗೆ ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 07th January 2023 01:33 PM | Last Updated: 07th January 2023 01:33 PM | A+A A-

ಸಾಂದರ್ಭಿಕ ಚಿತ್ರ
ಇಸ್ಲಾಮಾಬಾದ್: ಪಾಕಿಸ್ತಾನದ ಮುಜಾಫರ್‌ಗಢ ಜಿಲ್ಲೆಯಲ್ಲಿ 13 ವರ್ಷದ ಬಾಲಕಿ ಮೇಲೆ ಎಂಟು ತಿಂಗಳ ಕಾಲ ಮೂವರು ಅತ್ಯಾಚಾರ ಎಸಗಿದ್ದಾರೆ. ಆಕೆಯ ಬೆತ್ತಲೆ ಫೊಟೋಗಳು ಮತ್ತು ವಿಡಿಯೋಗಳನ್ನು ಬ್ಲ್ಯಾಕ್‌ಮೇಲ್‌ಗೆ ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜತೋಯ್ ತೆಹಸಿಲ್‌ನ ಕೋಟ್ಲಾ ರಹಮ್ ಶಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಡಾನ್ ವರದಿ ಮಾಡಿದೆ.
ಬಾಲಕಿ ಗರ್ಭಿಣಿ ಎಂದು ಪತ್ತೆಯಾದ ನಂತರ, ಜತೋಯ್ ಪೊಲೀಸರು ಇದೀಗ ಮೂವರು ಶಂಕಿತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರ ಪ್ರಕಾರ, ಗ್ಯಾಂಗ್‌ನ ಸದಸ್ಯರೊಬ್ಬರು ಎಂಟು ತಿಂಗಳ ಹಿಂದೆ ಹುಡುಗಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದಿದ್ದರು. ಅಲ್ಲಿ ಅವರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ವಿಡಿಯೋ ಚಿತ್ರೀಕರಿಸಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕೊಳವೆ ಬಾವಿಗೆ ಎಸೆದ ಆರೋಪಿಗಳು
ಬಳಿಕ ಅವರು ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದರು. ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವನ್ನು ಮುಂದುವರೆಸಿದರು ಎಂದು ಡಾನ್ ವರದಿ ಮಾಡಿದೆ.
ಬಳಿಕ ಆಕೆ ಆರೋಪಿಗಳ ವಿರುದ್ಧ ಸಹಾಯ ಮತ್ತು ಕ್ರಮಕ್ಕಾಗಿ ಪಂಜಾಬ್ ಮುಖ್ಯಮಂತ್ರಿ ಚೌಧರಿ ಪರ್ವೇಜ್ ಇಲಾಹಿ ಅವರಿಗೆ ಮನವಿ ಮಾಡಿದ್ದಾಳೆ.
ಸಂತ್ರಸ್ತೆ ನೀಡಿರುವ ದೂರಿನ ಆಧಾರದ ಮೇಲೆ, ಜತೋಯ್ ಪೊಲೀಸರು ಶಂಕಿತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಮೂವರು ಶಂಕಿತರಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಅವರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.