ಸೆನೆಗಲ್ ನಲ್ಲಿ ಭೀಕರ ರಸ್ತೆ ಅಪಘಾತ: 40 ಮಂದಿ ದುರ್ಮರಣ, 85 ಮಂದಿಗೆ ಗಾಯ
ದಕ್ಷಿಣ ಅಫ್ರಿಕಾದ ಸೆನೆಗಲ್ ದೇಶದ ರಾಜಧಾನಿ ಡಾಕಾರ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 40 ಮಂದಿ ದುರ್ಮರಣವನ್ನಪ್ಪಿರುವ ಘಟನೆ ನಡೆಡಿದೆ.
Published: 09th January 2023 07:58 AM | Last Updated: 09th January 2023 01:38 PM | A+A A-

ಅಪಘಾತ ಸಂಭವಿಸಿದ ಸ್ಥಳ.
ಸೆನೆಗಲ್: ದಕ್ಷಿಣ ಅಫ್ರಿಕಾದ ಸೆನೆಗಲ್ ದೇಶದ ರಾಜಧಾನಿ ಡಾಕಾರ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 40 ಮಂದಿ ದುರ್ಮರಣವನ್ನಪ್ಪಿರುವ ಘಟನೆ ನಡೆಡಿದೆ.
ಸಾರ್ವಜನಿಕ ಬಸ್‌ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 40 ಮಂದಿ ಸಾವನ್ನಪ್ಪಿದ್ದು, 85ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
85 ಮಂದಿ ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಪ್ರತೀಕಾರ ದಾಳಿಯಲ್ಲಿ 600 ಸೈನಿಕರ ಹತ್ಯೆಗೈದ ರಷ್ಯಾ: ಸುಳ್ಳು ಎಂದ ಉಕ್ರೇನ್
ಕಾಫ್ರಿನ್ ಪ್ರದೇಶದ ಗ್ನಿವಿ ಗ್ರಾಮದಲ್ಲಿ ಮುಂಜಾನೆ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಅಧ್ಯಕ್ಷ ಮ್ಯಾಕಿ ಸಾಲ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಇಂದು ಗ್ನಿಬಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 40 ಜನರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಈ ದುರಂತ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಅವರಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗುವುದು” ಎಂದು ತಿಳಿಸಿದ್ದಾರೆ.
ಸೋಮವಾರದಿಂದ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದ ಅವರು, ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಲು ಸಭೆ ನಡೆಸುವುದಾಗಿ ಮ್ಯಾಕಿ ಸಾಲ್ ಹೇಳಿದ್ದಾರೆ.