ತಾಲಿಬಾನ್ ವಿದೇಶಾಂಗ ಸಚಿವಾಲಯದ ಬಳಿ ಆತ್ಮಾಹುತಿ ಬಾಂಬ್ ದಾಳಿ: 20ಕ್ಕೂ ಹೆಚ್ಚು ಸಾವು, ರಸ್ತೆಯಲ್ಲಿ ಹೆಣಗಳ ರಾಶಿ!

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನು ಸ್ಫೋಟದ ತೀವ್ರತೆಗೆ ಹೆಣಗಳು ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನು ಸ್ಫೋಟದ ತೀವ್ರತೆಗೆ ಹೆಣಗಳು ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. 

ಬುಧವಾರ ಸಂಜೆ ತಾಲಿಬಾನ್ ಮತ್ತು ಚೀನಾದ ಅಧಿಕಾರಿಗಳ ನಡುವೆ ಸಭೆ ನಡೆಯುತ್ತಿದ್ದಾಗಲೇ ತಾಲಿಬಾನ್ ವಿದೇಶಾಂಗ ಸಚಿವಾಲಯದ ಹೊರಗೆ ಸ್ಫೋಟ ಸಂಭವಿಸಿದೆ.

ವರದಿಗಳ ಪ್ರಕಾರ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೊರಗೆ ಸ್ಫೋಟಗಳು ಮತ್ತು ಗುಂಡಿನ ಸದ್ದು ಕೇಳಿಬಂದಿತು. ಆತ್ಮಾಹುತಿ ಬಾಂಬರ್ ಸಚಿವಾಲಯದ ಬಳಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಈ ಘಟನೆಯಲ್ಲಿ ಕೆಲವರು ಸಾವನ್ನಪ್ಪಿದ್ದು ಇನ್ನು ಹಲವರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫಿ ಠಾಕೂರ್ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾಬೂಲ್‌ನ ಸೇನಾ ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿತ್ತು. ಕಾಬೂಲ್‌ನ ಸೇನಾ ವಿಮಾನ ನಿಲ್ದಾಣದ ಮುಖ್ಯ ಗೇಟ್ ಬಳಿ ನಡೆದ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದರು. 

ಡಿಸೆಂಬರ್ 12ರಂದು ಹೋಟೆಲ್ ಮೇಲೆ ದಾಳಿ
ಇದಕ್ಕೂ ಮೊದಲು ಡಿಸೆಂಬರ್ 12ರಂದು ದಾಳಿಕೋರರು ಕಾಬೂಲ್‌ನ ಶಹರ್-ಎ-ನವಾ ಪ್ರದೇಶದ ಹೋಟೆಲ್ ಅನ್ನು ಗುರಿಯಾಗಿಸಿಕೊಂಡಿದ್ದರು. ಈ ಹೋಟೆಲ್ ಅನ್ನು ಚೈನೀಸ್ ಹೋಟೆಲ್ ಎಂದು ಕರೆಯಲಾಗುತ್ತದೆ. ಏಕೆಂದರೆ ಚೀನಾದ ಹಿರಿಯ ಅಧಿಕಾರಿಗಳು ಆಗಾಗ್ಗೆ ಇಲ್ಲಿಗೆ ಬಂದು ಹೋಗುತ್ತಾರೆ. ಈ ದಾಳಿಯಲ್ಲಿ 3 ಜನರು ಸಾವನ್ನಪ್ಪಿದ್ದು 18 ಜನರು ತೀವ್ರವಾಗಿ ಗಾಯಗೊಂಡಿದ್ದರು. ದಾಳಿಕೋರರು ಗುಂಡು ಹಾರಿಸುತ್ತಾ ಹೋಟೆಲ್‌ಗೆ ನುಗ್ಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com