ಪಾಕ್ ಚೆಕ್‌ಪೋಸ್ಟ್ ಮೇಲೆ ಉಗ್ರರ ದಾಳಿ, ಇಬ್ಬರು ಪೊಲೀಸರ ಹತ್ಯೆ
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಧೇರಿ ಜರ್ದಾದ್ ಚೆಕ್ ಫೋಸ್ಟ್ ಮೇಲೆ ಉಗ್ರರು ದಾಳಿ ಮಾಡಿದ ನಂತರ ಇಬ್ಬರು ಪೊಲೀಸ್ ಸಿಬ್ಬಂದಿ ಹತ್ಯೆಯಾಗಿದ್ದು, ಮತ್ತೋರ್ವರು ಗಾಯಗೊಂಡಿದ್ದಾರೆ ಎಂದು ದಿ ನ್ಯೂಸ್ ಇಂಟರ್‌ನ್ಯಾಶನಲ್ ವರದಿ ಮಾಡಿದೆ.
Published: 22nd January 2023 09:58 PM | Last Updated: 23rd January 2023 02:15 PM | A+A A-

ಸ್ಥಳದಲ್ಲಿರುವ ಪೊಲೀಸರ ಚಿತ್ರ
ಖೈಬರ್ ಪಖ್ತುಂಖ್ವಾದ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಧೇರಿ ಜರ್ದಾದ್ ಚೆಕ್ ಫೋಸ್ಟ್ ಮೇಲೆ ಉಗ್ರರು ದಾಳಿ ಮಾಡಿದ ನಂತರ ಇಬ್ಬರು ಪೊಲೀಸ್ ಸಿಬ್ಬಂದಿ ಹತ್ಯೆಯಾಗಿದ್ದು, ಮತ್ತೋರ್ವರು ಗಾಯಗೊಂಡಿದ್ದಾರೆ ಎಂದು ದಿ ನ್ಯೂಸ್ ಇಂಟರ್‌ನ್ಯಾಶನಲ್ ವರದಿ ಮಾಡಿದೆ.
ಚೆಕ್ ಪೋಸ್ಟ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಗಾಯಗೊಂಡಿದ್ದ ಮೂವರು ಪೊಲೀಸರನ್ನು ಚಾರ್ಸದ್ದಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ,ಅವರಲ್ಲಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹತ್ಯೆಯಾದ ಪೊಲೀಸರನ್ನು ಇಮ್ರಾನ್ ಮತ್ತು ಮುನೀರ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂರನೇಯ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೇಶಾವರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಪೊಲೀಸ್ ಸಿಬ್ಬಂದಿ ಪ್ರತಿದಾಳಿ ನಡೆಸಿದ ನಂತರ ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದು, ಪ್ರತಿ ದಾಳಿಯಲ್ಲಿ ಭಯೋತ್ಪಾದಕನೋರ್ವ ಗಾಯಗೊಂಡಿದ್ದಾನೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಸುಹೇಲ್ ಖಾಲಿದ್ ತಿಳಿಸಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಭಯೋತ್ಪಾದಕರು ಮತ್ತು ಅವರ ಸಹಚರರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.