
ಸಂಗ್ರಹ ಚಿತ್ರ
ಕರಾಚಿ: ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 40 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಬಸ್ ಕ್ವೆಟ್ಟಾದಿಂದ ಕರಾಚಿಗೆ ತೆರಳುತ್ತಿತ್ತು, ಸುಮಾರು 48 ಮಂದಿ ಪ್ರಯಾಣಿಕರು ಬಸ್ ನಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೇಗವಾಗಿ ಚಲಿಸುತ್ತಿದ್ದ ಬಸ್ ಲಾಸ್ಬೆಲಾ ಬಳಿ ಯು-ಟರ್ನ್ ತೆಗೆದುಕೊಳ್ಳುವಾಗ ಸೇತುವೆಯ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ವಾಹನ ಕಂದಕಕ್ಕೆ ಉರುಳಿ ಬಿದ್ದಿದ್ದು, ಕೂಡಲೇ ಬಸ್'ಗೆ ಬೆಂಕಿ ಹೊತ್ತುಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಪೆರುವಿನಲ್ಲಿ ಭೀಕರ ರಸ್ತೆ ಅಪಘಾತ: ಬಂಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಬಸ್, 24 ಮಂದಿ ದುರ್ಮರಣ
ಘಟನೆಯಲ್ಲಿ ಮಗು ಹಾಗೂ ಮಹಿಳೆ ಸೇರಿದಂತೆ ಮೂವರನ್ನು ಬದುಕುಳಿದಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಮೃತರ ಸಂಖ್ಯೆ ಹೆಚ್ಚಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.